ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಟೆಲಿಗ್ರಾಂ ಆ್ಯಪ್ ಮೂಲಕ ಶಿಕ್ಷಕಿಗೆ ಬೆದರಿಕೆ; ಯುವಕನ ಬಂಧನ

ಟೆಲಿಗ್ರಾಂ ಆ್ಯಪ್ ಮೂಲಕ ಕೊಲೆ ಬೆದರಿಕೆ ಹಾಕಿ ಶಿಕ್ಷಕಿಯೊಬ್ಬರಿಂದ 1 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅತ್ರಿಂಜ ನಿವಾಸಿ ಅಶ್ವಥ್ ಹೆಬ್ಬಾರ್ (23) ಬಂಧಿತ ಆರೋಪಿ.

ಸುಲ್ಕೇರಿ ಗ್ರಾಮದ ಪೆರೋಡಿತ್ತಾಯಕಟ್ಟೆಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿ ಎಂಬುವವರಿಗೆ ನಕಲಿ ಟೆಲಿಗ್ರಾಂ ಖಾತೆ ಬಳಸಿ ಅಶ್ವಥ್ 3 ಲಕ್ಷ ರೂ. ಹಣ ನೀಡದಿದ್ದರೆ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಜ್ಯೋತಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಎಎಸ್‌ಐ ಸೌಮ್ಯಾ ಜೆ, ಆನಂದ ಎಂ ಮತ್ತು ತಂಡ ಆ.2ರಂದು ಮಧ್ಯರಾತ್ರಿ ತೆಂಕಕರಂದೂರು ಗ್ರಾಮದ ಗುಂಡೇರಿಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿನಿಮಾ ಸ್ಟೈಲ್ ನಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸಂತ್ರಸ್ತೆ ಜ್ಯೋತಿ ಪೊಲೀಸರ ನೆರವಿನೊಂದಿಗೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆರೋಪಿಗೆ ತಿಳಿಸಿದ್ದಾಳೆ. ಅಳದಂಗಡಿ ಕೆದುವಿನ ಬಳಿ ಹಣ ಇಡುವಂತೆ ಆರೋಪಿ ಹೇಳಿದ್ದಾನೆ. ಬಳಿಕ ಜ್ಯೋತಿಗೆ ಆ ಸ್ಥಳದಲ್ಲಿ ಹಣ ಇಡಬೇಡಿ ಎಂದು ಸಂದೇಶ ರವಾನಿಸಿ ಮೂರ್ನಾಲ್ಕು ಬಾರಿ ಸ್ಥಳ ಬದಲಾಯಿಸಿದ್ದರು.

ಕೊನೆಗೆ ಆರೋಪಿ ಸಂತ್ರಸ್ತೆ ಹಣವನ್ನು ಶಿರ್ಲಾಲುವಿನ ಸವಣಾಳು ಕ್ರಾಸ್ ಬಳಿ ಇಡುವಂತೆ ತಿಳಿಸಿದ್ದಾರೆ. ಅದರಂತೆ ಸಂತ್ರಸ್ತೆ ಜ್ಯೋತಿ ಅವರು ಹಣವಿದ್ದ ಬ್ಯಾಗನ್ನು ಸ್ಥಳದಲ್ಲಿ ಇಟ್ಟಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸ್ಥಳದಿಂದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಆದರೆ, ಅಲ್ಲೇ ಅಡಗಿಕೊಂಡಿದ್ದ ಪೊಲೀಸರು ಆತನನ್ನು ಹಿಡಿಯುವ ಮುನ್ನ ಪರಾರಿಯಾಗಿದ್ದಾನೆ.

ಪೊಲೀಸರು ಆರೋಪಿ ಅಶ್ವಥ್ ಹೆಬ್ಬಾರ್‌ನ ಮೊಬೈಲ್ ಫೋನ್ ಟ್ರ್ಯಾಕ್ ಮಾಡಿ ಮಧ್ಯರಾತ್ರಿ ಗುಂಡೇರಿಯಿಂದ ತನ್ನ ಅಣ್ಣನ ಮನೆಯಲ್ಲಿ ಅಡಗಿಕೊಂಡಿದ್ದ ಆತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಬೈಕ್ ಹಾಗೂ ಒಂದು ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!