ಟೆಲಿಗ್ರಾಂ ಆ್ಯಪ್ ಮೂಲಕ ಕೊಲೆ ಬೆದರಿಕೆ ಹಾಕಿ ಶಿಕ್ಷಕಿಯೊಬ್ಬರಿಂದ 1 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅತ್ರಿಂಜ ನಿವಾಸಿ ಅಶ್ವಥ್ ಹೆಬ್ಬಾರ್ (23) ಬಂಧಿತ ಆರೋಪಿ.
ಸುಲ್ಕೇರಿ ಗ್ರಾಮದ ಪೆರೋಡಿತ್ತಾಯಕಟ್ಟೆಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿ ಎಂಬುವವರಿಗೆ ನಕಲಿ ಟೆಲಿಗ್ರಾಂ ಖಾತೆ ಬಳಸಿ ಅಶ್ವಥ್ 3 ಲಕ್ಷ ರೂ. ಹಣ ನೀಡದಿದ್ದರೆ ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಜ್ಯೋತಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಎಎಸ್‌ಐ ಸೌಮ್ಯಾ ಜೆ, ಆನಂದ ಎಂ ಮತ್ತು ತಂಡ ಆ.2ರಂದು ಮಧ್ಯರಾತ್ರಿ ತೆಂಕಕರಂದೂರು ಗ್ರಾಮದ ಗುಂಡೇರಿಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿನಿಮಾ ಸ್ಟೈಲ್ ನಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸಂತ್ರಸ್ತೆ ಜ್ಯೋತಿ ಪೊಲೀಸರ ನೆರವಿನೊಂದಿಗೆ ಒಂದು ಲಕ್ಷ ರೂಪಾಯಿ ನೀಡುವುದಾಗಿ ಆರೋಪಿಗೆ ತಿಳಿಸಿದ್ದಾಳೆ. ಅಳದಂಗಡಿ ಕೆದುವಿನ ಬಳಿ ಹಣ ಇಡುವಂತೆ ಆರೋಪಿ ಹೇಳಿದ್ದಾನೆ. ಬಳಿಕ ಜ್ಯೋತಿಗೆ ಆ ಸ್ಥಳದಲ್ಲಿ ಹಣ ಇಡಬೇಡಿ ಎಂದು ಸಂದೇಶ ರವಾನಿಸಿ ಮೂರ್ನಾಲ್ಕು ಬಾರಿ ಸ್ಥಳ ಬದಲಾಯಿಸಿದ್ದರು.
ಕೊನೆಗೆ ಆರೋಪಿ ಸಂತ್ರಸ್ತೆ ಹಣವನ್ನು ಶಿರ್ಲಾಲುವಿನ ಸವಣಾಳು ಕ್ರಾಸ್ ಬಳಿ ಇಡುವಂತೆ ತಿಳಿಸಿದ್ದಾರೆ. ಅದರಂತೆ ಸಂತ್ರಸ್ತೆ ಜ್ಯೋತಿ ಅವರು ಹಣವಿದ್ದ ಬ್ಯಾಗನ್ನು ಸ್ಥಳದಲ್ಲಿ ಇಟ್ಟಿದ್ದರು. ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ ಸ್ಥಳದಿಂದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಆದರೆ, ಅಲ್ಲೇ ಅಡಗಿಕೊಂಡಿದ್ದ ಪೊಲೀಸರು ಆತನನ್ನು ಹಿಡಿಯುವ ಮುನ್ನ ಪರಾರಿಯಾಗಿದ್ದಾನೆ.
ಪೊಲೀಸರು ಆರೋಪಿ ಅಶ್ವಥ್ ಹೆಬ್ಬಾರ್‌ನ ಮೊಬೈಲ್ ಫೋನ್ ಟ್ರ್ಯಾಕ್ ಮಾಡಿ ಮಧ್ಯರಾತ್ರಿ ಗುಂಡೇರಿಯಿಂದ ತನ್ನ ಅಣ್ಣನ ಮನೆಯಲ್ಲಿ ಅಡಗಿಕೊಂಡಿದ್ದ ಆತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಬೈಕ್ ಹಾಗೂ ಒಂದು ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…