ನೆರೆಮನೆಯ ಮಹಿಳೆಯೊಬ್ಬರು ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ಸಂಘ ಪರಿವಾರದ ಕಾರ್ಯಕರ್ತನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಬುಧವಾರ ಒಪ್ಪಿಸಿದ್ದಾರೆ.
ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದೆ.

ಅವರು ಪಕ್ಷಿಕೆರೆಯ ಹಿಂದೂ ಜಾಗರಣ ವೇದಿಕೆ (.) ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ.
ಮಹಿಳೆಯೊಬ್ಬರು ತನ್ನ ಬಾತ್ ರೂಂನಲ್ಲಿ ಮೊಬೈಲ್ ಕ್ಯಾಮೆರಾ ನೋಡಿ ಕಿರುಚಿದ್ದಾರೆ. ನೆರೆಹೊರೆಯವರು ಆರೋಪಿ ಸುಮಂತ್ ನನ್ನು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸುಮಂತ್‌ನನ್ನು ಬಂಧಿಸಿದ್ದಾರೆ. ಚಿತ್ರೀಕರಿಸಿದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.



