ಜನ ಮನದ ನಾಡಿ ಮಿಡಿತ

Advertisement

ಉಡುಪಿ ಪ್ರಕರಣ ; ದಾಖಲೆ ಸಮೇತ ರಾಜ್ಯಪಾಲರಿಗೆ ಹಸ್ತಾಂತರ ; ಡಾ. ವೈ ಭರತ್ ಶೆಟ್ಟಿ

ಸುರತ್ಕಲ್ : ಅನ್ಯಾಯದ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಂಘಟನೆಗಳ ಧ್ವನಿಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನಗಳಾಗುತ್ತಿದ್ದು, ಇದು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆವ ಬಂದ ಬಳಿಕ ಮತ್ತಷ್ಟು ಹೆಚ್ಚಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದ್ದಾರೆ.


ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಕ್ಯಾಮರಾ ಅಳವಡಿಸಿ ಮೀಡಿಯಾ ಚಿತ್ರೀಕರಣ ಮಾಡುವ ಗಂಭೀರ ಅಪರಾಧವನ್ನು ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ.


ಇದರ ವಿರುದ್ಧ ಧ್ವನಿ ಎತ್ತಿರುವ ಹಿಂದೂ ಸಮಾಜದ ಮುಖಂಡ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ವೀಣಾ ಶೆಟ್ಟಿ ಸೇರಿದಂತೆ ಹಲವರ ಮೇಲೆ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಇದಕ್ಕೆಲ್ಲಾ ಮೂಲ ಕಾರಣ ಕಾಂಗ್ರೆಸ್ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.


ಉಡುಪಿ ಘಟನೆಯ ವಿವರಗಳನ್ನು ದಾಖಲೆ ಸಮೇತ ರಾಜ್ಯದ ರಾಜ್ಯಪಾಲರಿಗೆ ಕರಾವಳಿ ಬಿಜೆಪಿ ಶಾಸಕರ ನಿಯೋಗ ಹಸ್ತಾಂತರಿಸಿದ್ದು ಪ್ರಕರಣದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ಸರಕಾರಕ್ಕೆ ಸೂಚಿಸುವಂತೆ ಒತ್ತಾಯವನ್ನ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!