ರಾಷ್ಟ್ರ

ಚಂದ್ರನ ಕಕ್ಷೆ ಸೇರಲಿದೆ ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಬಾಹ್ಯಾಕಾಶ ನೌಕೆ

ಇಸ್ರೋ ಸಂಸ್ಥೆಯ ಕನಸು ನನಾಸಗುವತ್ತಾ ಚಂದ್ರಯಾನ-3 ದಾಪುಕಾಲಿಟ್ಟಿದೆ. ಚಂದ್ರಯಾನ- 3 ಬಾಹ್ಯಾಕಾಶ ನೌಕೆಯು ಇಂದು ಚಂದ್ರನ ಕಕ್ಷೆಯನ್ನು ಸೇರಲಿದೆ. ಪ್ರಕ್ರಿಯೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಂಜೆ 7 ಗಂಟೆಗೆ ಲೂನಾರ್ ಆರ್ಬಿಟ್ ಇಂಜೆಕ್ಷನ್ ಕಾರ್ಯ ಕೈಗೊಳ್ಳಲಿದೆ.


ಜುಲೈ 14ರಂದು ಚಂದ್ರಯಾನ- 3 ಅನ್ನು ನಭಕ್ಕೆ ಉಡಾವಣೆ ಮಾಡಲಾಗಿತ್ತು. ಈಗಾಗಲೇ ಸ್ಪೇಸ್‍ಕ್ರಾಫ್ಟ್ ನಿಗದಿತ ಪ್ರಯಾಣದಲ್ಲಿ 3ನೇ 2ರಷ್ಟು ದೂರ ಪ್ರಯಾಣ ಮಾಡಿದ್ದು, ಆಗಸ್ಟ್ 1 ರಂದು ಭೂಮಿಯ ಕಕ್ಷೆಯಿಂದ ಬೇರ್ಪಟ್ಟು ಚಂದ್ರನ ಕಡೆಗೆ ಪ್ರಯಾಣ ಬೆಳಸಿತ್ತು. ಹೀಗಾಗಿ ಇಂದು ಸಂಜೆ 7 ಗಂಟೆ ಸುಮಾರಿಗೆ ನೌಕೆಯು ಚಂದ್ರನ ಕಕ್ಷೆಯನ್ನು ಸೇರಲಿದೆ.


ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ- 3 ಅನ್ನು ಭಾರೀ ನಿರೀಕ್ಷೆಯನ್ನಿಟ್ಟುಕೊಂಡು ಭೂಮಿಯಿಂದ ನಭಕ್ಕೆ ಹಾರಿಸಲಾಗಿತ್ತು. ಅಂದಿನಿಂದ ಪ್ರಯಾಣದಲ್ಲೇ ಇರುವ ನೌಕೆಯು ಭೂಮಿಯ ಮೇಲಿನ 5 ಕಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಆಗಸ್ಟ್ 4 ರ ವೇಳೆಗೆ ಸ್ಪೇಸ್‍ಕ್ರಾಫ್ಟ್ ಸುಮಾರು 2.6 ಲಕ್ಷ ಕಿ.ಮೀ ದೂರ ಕ್ರಮಿಸಿತ್ತು. ಈ ಬಗ್ಗೆ ಇಸ್ರೋ ಸಂಸ್ಥೆಯು ಪ್ರತಿಯೊಂದನ್ನು ಮಾಹಿತಿ ತಿಳಿಸುತ್ತಲೇ ಬರುತ್ತಿದೆ. ಅದರಂತೆ ಇವತ್ತು ಚಂದ್ರನ ಕಕ್ಷೆಯನ್ನು ನೌಕೆ ಸೇರ್ಪಡೆ ಆಗಲಿದೆ. ಇದರೊಂದಿಗೆ ಆಗಸ್ಟ್ 23 ರಂದು ನೌಕೆಯಲ್ಲಿರುವ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಮೃದುವಾಗಿ ಇಳಿಸಲು ಪ್ರಯತ್ನಿಸಲಾಗುತ್ತದೆ.

ಒಂದು ವೇಳೆ ಈ ಮೃದು ಲ್ಯಾಂಡಿಂಗ್ ಯಶಸ್ವಿಯಾದರೇ ಭಾರತದ ಕೀರ್ತಿ ವಿಶ್ವಮಟ್ಟದಲ್ಲಿ ಸದ್ದು ಮಾಡಲಿದೆ. ಜೊತೆಗೆ ಈ ಸಾಧನೆ ಮಾಡಿದ 4ನೇ ರಾಷ್ಟ್ರ ಎಂಬ ಖ್ಯಾತಿ ಭಾರತ ಪಡೆಯಲಿದೆ. ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿದ ತಕ್ಷಣ ಅದರ ಒಳಗಿಂದ ರೋವರ್ ಹೊರ ಬಂದ ತಕ್ಷಣವೇ ಇಲ್ಲಿಂದಲೇ ಚಂದ್ರನ ಮೇಲೆ ಭಾರತದ ನೂತನ ಅಧ್ಯಯನ ಪ್ರಾರಂಭವಾಗಲಿದೆ. ಎಂಬ ಮಾಹಿತಿ ಲಭ್ಯವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

10 mins ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

14 mins ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

20 mins ago

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

23 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

4 days ago