ಬೆಂಗಳೂರಿನ ಮೈಕೋಲೇಔಟ್‍ನ ಪಿ.ಜಿಯೊಂದರ ಬಳಿ ಫೆÇೀನ್ ಕಾಲ್ ಅವೈಡ್ ಮಾಡಿದ್ದಕ್ಕೆ ಅನುಮಾನಗೊಂಡ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ರಾಡ್‍ನಿಂದ ಹೊಡೆದು ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.
ಸ್ನೇಹ ಸಿಕ್ತಾ ಚಟರ್ಜಿ (26) ಎನ್ನುವರು ಹಲ್ಲೆಗೊಳಗಾದ ಯುವತಿಯಾಗಿದ್ದು, ರವಿಕುಮಾರ್ (28) ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಟೆಕ್ಕಿಯಾಗಿದ್ದ ರವಿಕುಮಾರ್ ಕಳೆದ 1 ವರ್ಷದಿಂದ ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಇದೇ ಕಂಪನಿಗೆ ಇಂಟರ್ನ್ ಆಗಿ ಯುವತಿ ಕೆಲಸಕ್ಕೆ ಸೇರಿಕೊಂಡಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿದೆ.
ಇತ್ತೀಚೆಗೆ ಯುವತಿ ಬೇರೆ ಕಂಪನಿಗೆ ಸೇರಿಕೊಂಡು ಅಂತರ ಕಾಯ್ದುಕೊಂಡು ಫೆÇೀನ್ ಕಾಲ್‍ಗಳನ್ನ ಅವೈಡ್ ಮಾಡಿದ್ದಳು. ಕರೆಗಳಿಗೂ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ಇದರಿಂದ ಪ್ರಿಯಕರ ಅನುಮಾನಗೊಂಡಿದ್ದನು ಎನ್ನಲಾಗಿದೆ. ಇದರಿಂದ ಕೋಪಗೊಂಡು ಆತ ಯುವತಿಯನ್ನು ಪಿಜಿ ಬಳಿ ಕರೆಸಿಕೊಂಡು ಕಬ್ಬಿಣದ ರಾಡ್‍ನಿಂದ ಯುವತಿ ತಲೆಗೆ ಹಲ್ಲೆ ಮಾಡಿದ್ದಾನೆ.
ಇದರಿಂದ ತೀವ್ರ ರಕ್ತ ಸ್ರಾವವಾಗುತ್ತಿದ್ದ ಆಕೆಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಸದ್ಯ ನಿಮ್ಹಾನ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಸಂಬಂಧ ಮೈಕೋಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿ ರವಿಕುಮಾರ್‍ನನ್ನು ಪೊಲೀಸರು ಬಂಧಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…