ಕರಾವಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ; ಶಾಸಕ ವೇದವ್ಯಾಸ್ ಕಾಮತ್

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದ ದಿನದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರ ಬದುಕು ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.


ಕಳೆದ ಎರಡು ತಿಂಗಳ ಅವಧಿಯಲ್ಲಿ ಬೆಲೆಯೇರಿಕೆಯಿಂದ ಹೈರಾಣಾಗಿರುವ ಶ್ರೀ ಸಾಮಾನ್ಯನ ಕುರಿತು ಕಾಳಜಿಯಿಲ್ಲದ ಸರಕಾರ ಜನರನ್ನು ಲೂಟಿ ಮಾಡುವುದರಲ್ಲೇ ನಿರತವಾಗಿದೆ.
ಗೃಹಜ್ಯೋತಿ ಗ್ಯಾರೆಂಟಿ ಘೋಷಿಸಿದ್ದ ರಾಜ್ಯ ಸರಕಾರ ಜನತೆಗೆ ವಿದ್ಯುತ್ ದರ ಏರಿಕೆಯ ಬರೆ ಹಾಕಿದ್ದು, ವಿದ್ಯುತ್ ದರದಲ್ಲಿ ಗರಿಷ್ಟ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಸರಕಾರ ಜನರಿಗೆ ಮಂಕುಬೂದಿ ಎರಚಿ, 175 ರೂಪಾಯಿಯ ಅಕ್ಕಿ ಉಚಿತ ನೀಡುವುದಾಗಿ ಬೆನ್ನು ತಟ್ಟಿಕೊಳ್ಳುವ ಸರಕಾರ ಹಾಲಿನ ದರ 3 ರೂಪಾಯಿ ಹೆಚ್ಚಿಸಿ, ಪ್ರತಿ ಮನೆಯಿಂದ ತಿಂಗಳಿಗೆ ಕನಿಷ್ಠ 1 ಸಾವಿರಕ್ಕೂ ಅಧಿಕ ರೂಪಾಯಿ ಕೊಳ್ಳೆಹೊಡೆಯುತ್ತಿದೆ. ಮೂರು ತಿಂಗಳ ಹಿಂದೆ ಕೆ.ಜಿಗೆ 38-40 ರೂಪಾಯಿಗಳಷ್ಟಿದ್ದ ಅಕ್ಕಿ ಬೆಲೆ ಇಂದು 50 ರೂಪಾಯಿ ಅಸುಪಾಸಿನಲ್ಲಿದೆ ಎಂದು ಹೇಳಿದರು.
ತರಕಾರಿಗಳ ಬೆಲೆಯೇರಿಕೆಯಿಂದ ರಾಜ್ಯದ ಜನರು ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಸಿ ಸಾಮಾಗ್ರಿಗಳ ಬೆಲೆಯೇರಿಕೆಯಿಂದ ಜನ ಸಾಮಾನ್ಯನ ಮೇಲೆ ಮಾತ್ರವಲ್ಲ ಹೋಟೆಲ್ ಉದ್ಯಮದ ಮೇಲೂ ಪ್ರಭಾವ ಬೀರಿದೆ. ಕಳೆದ ಕೆಲವು ದಿನಗಳಿಂದ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಹೋಟೆಲು ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಅಂದು ಬೆಲೆಯೇರಿಕೆಯಾಗಿದೆ ಎಂದು ಬೀದಿಗಿಳಿದು ಹೋರಾಟ ಮಾಡಿದ್ದ ಕಾಂಗ್ರೇಸ್ ನಾಯಕರೆಲ್ಲರೂ ನಾಪತ್ತೆಯಾಗಿದ್ದಾರೆ ಎಂದು ಹೇಳಿದರು.


ಶಾಲಾ, ಕಾಲೇಜುಗಳ ವಾಹನಗಳು, ಅತೀ ಭಾರದ ಸರಕು ಸಾಗಣೆ ವಾಹನಗಳು, ಮೋಟಾರು ಕ್ಯಾಬ್ ಗಳ ತೆರಿಗೆ ಹೆಚ್ಚಳ ಮಾಡಲಾಗಿದೆ. ಶಾಲಾ ವಿಧ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಸಂಚಾರಕ್ಕೆ ಬಳಸುವ ವಾಹನಗಳ ಪ್ರತಿ ಚದರ ಮೀಟರ್ ತೆರಿಗೆಯನ್ನು 20 ರೂಪಾಯಿಯಿಂದ 100 ರೂಪಾಯಿಗೆ ಏರಿಕೆ ಮಾಡಲಾಗಿದ್ದು ರಾಜ್ಯ ಸರಕಾರವು ಜನರಿಂದ ಲೂಟಿ ಮಾಡುತ್ತಿದೆ.


ಅಬಕಾರಿ ಶುಲ್ಕ ಹೆಚ್ಚಳದಿಂದ ಸರಕಾರ ಬೊಕ್ಕಸ ತುಂಬಿಸಲು ಪ್ರಯತ್ನಿಸುತ್ತಿದೆ. ಸ್ಟಾಂಪ್ ಡ್ಯೂಟಿ ತೆರಿಗೆ ಹೆಚ್ಚಳದಿಂದ ನಗರದಲ್ಲಿ ಔದ್ಯಮಿಕ ಬೆಳವಣಿಗೆಗೆ ಸಮಸ್ಯೆ ಉಂಟಾಗುತ್ತಿದೆ. ನಿರಂತರವಾಗಿ ಜನರನ್ನು ಲೂಟಿ ಮಾಡುವ ಮೂಲಕ ರಾಜ್ಯ ಸರಕಾರವು ಶ್ರೀ ಸಾಮಾನ್ಯನ್ನು ಬೀದಿಗೆ ತಂದು ನಿಲ್ಲಿಸಿದೆ.


ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರೇ ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಹೊಂದಿಸುವುದು ಕಷ್ಟ ಎಂಬರ್ಥದಲ್ಲಿ ನೀಡಿರುವ ಹೇಳಿಕೆಯು ಇದಕ್ಕೆ ಪೂರಕವಾಗಿದ್ದು ಜನಸಾಮಾನ್ಯರ ಬೇಡಿಕೆಗಳನ್ನು ರಾಜ್ಯ ಸರಕಾರ ಸಂಪೂರ್ಣ ಕಡೆಗಣಿಸಿ ಆಡಳಿತ ನಡೆಸುತ್ತಿದೆ. ಈ ಕಾರಣಗಳಿಂದಾಗಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಗ್ಯಾರಂಟಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಿಚಾರಗಳಿಗೆ ಸರಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

5 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

5 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

5 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

5 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

5 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

5 days ago