ಉಳ್ಳಾಲ : ಉಳ್ಳಾಲದಲ್ಲಿ ನಡೆದ ಪೊಲೀಸ್ ಕಾರ್ಯಚರಣೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಮರಳು ದಾಸ್ತಾನು ಇರಿಸಿದ್ದ, ಸ್ಥಳಕ್ಕೆ ದಾಳಿ ನಡೆಸಿದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸ್ ತಂಡ 10 ಲೋಡ್ ಮರಳು ಸೀಜ್ ಮಾಡಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಕೋಡಿ ಸಮೀಪ ಮರಳು ದಾಸ್ತಾನು ಇರಿಸಿದ ಕೋಡಿ ನಿವಾಸಿಗಳಾದ ಉಮ್ಮರ್, ನೌಫಾಲ್, ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ಥಳದಿಂದ ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.



