ಕಳೆದ ವಾರ ಧರ್ಮಸ್ಥಳ ದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ಮಾಡಿದ್ದು ಇದೀಗ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿ ಅವಿನಾಶ್ (26) ಧರ್ಮಸ್ಥಳ ನಿವಾಸಿ ನಂದಿತ್ (20) ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಅಕ್ಷತ್ (22) ಬಂಧಿತ ಆರೋಪಿಗಳು. ಮೂವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ಆರೋಪಿಗಳಿಗೆ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬೆಂಗಳೂರಿನ ನಿವಾಸಿ ಹಿಂದೂ ವಿದ್ಯಾರ್ಥಿನಿ ಒಬ್ಬಳು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಕಳೆದ ವಾರ ಕಾಲೇಜ್ ಕೊನೆಗೊಂಡಿದ್ದರಿಂದ ಬುಧವಾರ ರಾತ್ರಿ ಬೆಂಗಳೂರಿಗೆ ಲಗೇಜ್ ಜೊತೆ ತೆರಳಲು ಉಜಿರೆದ್ವಾರದ ಎದುರು ನಿಂತು ಪರಿಚಯಸ್ತ ಮುಸ್ಲಿಂ ಆಟೋ ಚಾಲಕನಿಗೆ ಕರೆ ಮಾಡಿದ್ದು ಆತ ಬಂದು ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಆಗಸ್ಟ್ ಎರಡರಂದು ರಾತ್ರಿ ಸುಮಾರು 9 ಗಂಟೆಗೆ ಡ್ರಾಪ್ ಮಾಡಿ ಹೊರಡುವಾಗ ಅಪರಿಚಿತ ಯುವಕರ ತಂಡವೊಂದು “ನಿನಗೆ ಹಿಂದು ಯುವತಿಯರೇ ಬೇಕ” ಎಂದು ಬೆದರಿಕೆ ಹಾಕಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಅವರ ಏಳನೇ ಪುತ್ರ ಆಟೋ ಚಾಲಕ ಮೊಹಮ್ಮದ್ ಆಶೀಕ್ (22) ಮೇಲೆ ಹಲ್ಲೆ ನಡೆಸಿದ್ದರು. ಯುವಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಲಂ 143, 147, 341, 323, 504, 506, R/W 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…