11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಿಚ್ಚು ಮತ್ತೆ ಹಚ್ಚಿಕೊಂಡಿದ್ದು ಎಲ್ಲೆಲ್ಲೂ ಸೌಜನ್ಯ ಪರ ಬ್ಯಾನರ್ ಗಳು ಕಾಣಿಸುತ್ತಿದೆ. ಇನ್ನು ಮೊನ್ನೆ ನಡೆದ ಬೃಹತ್ ಸಮಾವೇಶದ ನಂತರವಂತು ಸೌಜನ್ಯ ತಾಯಿಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಎಲ್ಲೆಲ್ಲೂ ಬ್ಯಾನರ್ ಗಳು ಕಾಣಿಸುತ್ತಿವೆ. ಇದು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವ ಸಂಭವವಿದೆ; ಹಾಗಾಗಿ ಅನರ್ಧಿಕೃತವಾಗಿ ಹಾಕಲಾಗಿರುವ ಫ್ಲೆಕ್ಸ್ ಗಳನ್ನು ತೆರವು ಮಾಡಬೇಕು ಎಂದು ಸೂಚಿಸಲಾಗಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಅನಧಿಕೃತವಾಗಿ ಹಾಕಲಾಗಿರುವ ಪ್ಲೆಕ್ಸ್‌ಗಳಿಂದಾಗಿ ಸಮಾಜದಲ್ಲಿ ಅಶಾಂತಿಯುಂಟಾಗುವ ಅಪಾಯವಿದ್ದು, ಈ ಹಿನ್ನೆಲೆಯಲ್ಲಿ ಅಳವಡಿಸಲಾಗಿರುವ ರಾಜಕೀಯ, ಧಾರ್ಮಿಕ ಹಾಗೂ ಸೌಜನ್ಯಾ ಪ್ರಕರಣಗಳಿಗೆ ಸಂಬಂಧಿಸಿದ ಬ್ಯಾನರ್ ಗಳನ್ನು ಹಾಗೂ ಪ್ಲೆಕ್ಸ್‌ಗಳನ್ನು ತೆರವುಗೊಳಿಸುವಂತೆ ಪಿಡಿಒಗಳಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸೂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ವೃತ್ತ ನಿರೀಕ್ಷಕರು ಬರೆದಿರುವ ಪತ್ರದ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಈ ಸೂಚನೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ‘ಪ್ರಜ್ಞಾವಂತ ನಾಗರಿಕರು’ ಎಂಬ ಹೆಸರಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆಯಲಾಗಿದ್ದು, ಅದರಲ್ಲಿ ತಾಲೂಕಿನಲ್ಲಿ ತನಿಖಾ ಸಂಸ್ಥೆಗಳನ್ನು ಹಾಗೂ ಸೌಜನ್ಯ ಪ್ರಕರಣದ ತೀರ್ಪನ್ನು ಟೀಕಿಸುವ, ಯಾರನ್ನೋ ಅಪರಾಧಿಗಳಾಗಿ ಬಿಂಬಿಸಿಕೊಂಡು ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಬ್ಯಾನರ್, ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇದರಿಂದಾಗಿ ಸಮಾಜದಲ್ಲಿ ಅಶಾಂತಿಯುಂಟಾಗುವ ಸಾಧ್ಯತೆಯಿದ್ದು, ಅವುಗಳನ್ನು ತೆರವುಗೊಳಿಸುವಂತೆ ಮನವಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ಎಸ್ಪಿ ಸೂಚಿಸಿದ್ದಾರೆ. ಅದರ ಆಧಾರದಲ್ಲಿ ವೃತ್ತ ನಿರೀಕ್ಷಕರು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿದ್ದರು.
ಇದೀಗ ತಾಪಂ ಕಾರ್ಯನಿರ್ವಹಣಾಧಿಕಾರಿ ಅವರು ಎಲ್ಲ ಗ್ರಾಮಗಳ ಅಭಿವೃದ್ಧಿ ಅಧಿಕಾರಿಗಳಿಗೆ ಅನಧಿಕೃತ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಸೂಚನೆನೀಡಿದ್ದಾರೆ. ತಾಲೂಕಿನ ಮೂಲೆ ಮೂಲೆಗಳಲ್ಲಿ ಸೌಜನ್ಯಾಳ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಬ್ಯಾನರ್ ಗಳನ್ನು ಅಳವಡಿಸಲಾಗಿದೆ. ಮತ್ತೊಂದೆಡೆಯಿಂದ ಆಗಸ್ಟ್ 28ರಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆಗೆ ಸಂಘಟನೆಗಳು ಸಿದ್ಧವಾಗುತ್ತಿದ್ದು ಅದರ ಬ್ಯಾನರ್ ಗಳೂ ಕಾಣಿಸಲಾರಂಭಿಸಿವೆ. ಸೌಜನ್ಯ ತಾಯಿಯ ಮೇಲೆ ಹಲ್ಲೆ ಯತ್ನದ ಬಳಿಕವಂತೂ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಸೌಜನ್ಯಾ ಪರ ಬ್ಯಾನರ್ ಗಳು ಪ್ರತ್ಯಕ್ಷವಾಗಿವೆ. ಇದೀಗ ಬ್ಯಾನರ್ ತೆರವಿನ ಆದೇಶವನ್ನು ಗ್ರಾಪಂ ಆಡಳಿತಗಳು ಹೇಗೆ ನಿರ್ವಹಿಸಲಿವೆ ಎಂದು ಕಾದು ನೋಡಬೇಕಾಗಿದೆ.
ಸೌಜನ್ಯಾಳ ಪರ ದ್ವನಿ ಎತ್ತಿರುವ ಹಲವು ಸಂಘಟನೆಗಳು ಈ ನಿರ್ಧಾರವನ್ನು ಹೇಗೆ ಸ್ವೀಕರಿಸುತ್ತವೆ ಎಂಬುದನ್ನು ಕೂಡ ಕಾದು ನೋಡಬೇಕಾಗಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…