ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಸೂಚನೆಯ ಮೇರೆಗೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಿರಿಯ ನಾಗರಿಕರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಕೆಲವು ಮಂದಿ ಹಿರಿಯ ನಾಗರಿಕರು ಸಮಸ್ಯೆಗಳನ್ನು ತೋಡಿಕೊಂಡ ಹಿನ್ನೆಲೆ ಯಲ್ಲಿ ಪೊಲೀಸ್ ಆಯುಕ್ತರು ಎಲ್ಲಾ ಠಾಣೆಗಳ ಅಧಿಕಾರಿಗಳಿಗೆ ಹಿರಿಯ ನಾಗರಿಕರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸುವಂತೆ ಸೂಚಿಸಿದ್ದರು. ಅದರಂತೆ ಆಯುಕ್ತಾಲಯ ವ್ಯಾಪ್ತಿಯಲ್ಲಿ 438 ಮನೆಗಳಿಗೆ ತೆರಳಿ ಅಲ್ಲಿ ವಾಸವಾಗಿದ್ದ ಹಿರಿಯ ನಾಗರಿಕರನ್ನು ಭೇಟಿ ಮಾಡಿದ್ದರು. ಅದರಲ್ಲೂ ಉರ್ವ ಠಾಣಾ ವ್ಯಾಪ್ತಿಯೊಂದರಲ್ಲೇ 100 ಮನೆಗಳಿಗೆ ಪೊಲೀಸರು ಭೇಟಿ ಮಾಡಿರುವುದಾಗಿ ತಿಳಿದು ಬಂದಿದೆ.




