ಮುಲ್ಕಿ: ಬಂಟರ ಸಂಘದ 2023-24 ನೇ ಸಾಲಿನ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಮುಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ, ಸಾಧಕರಿಗೆ ಸನ್ಮಾನ ಹಾಗೂ ಆಟಿದ ತಮ್ಮನದ ಕಾರ್ಯಕ್ರಮ ಕಾರ್ನಾಡ್ ಮುಲ್ಕಿ ಬಂಟರ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸಂಘದ ಅಧ್ಯಕ್ಷ ಕೆ. ಪುರುಷೋತ್ತಮ ಶೆಟ್ಟಿ ವಹಿಸಿದ್ದರು.
ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಸಂಘ ಸಂಸ್ಥೆಗಳು ಸಮಾಜದಲ್ಲಿ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಲು ಶ್ರಮಿಸಬೇಕು. ಇದಕ್ಕೆ ಮುಲ್ಕಿ ಬಂಟರ ಸಂಘ ಮಾದರಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಂಬಯಿ ವಿ. ಕೆ.ಸಮೂಹ ಸಂಸ್ಥೆಯ ಅಧ್ಯಕ್ಷ ಕೆ.ಎಂ.ಶೆಟ್ಟಿ ಮಧ್ಯಗುತ್ತು ಬೆಂಗಳೂರು ಬಂಟರ ಸಮೂಹದ ವಿದ್ಯಾನಿಧಿ ಕಮಿಟಿಯ ಸದಾನಂದ ಸುಲಾಯ, ಮುಲ್ಕಿ ಸುಂದರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಸುಕುಮಾರ್ ಶೆಟ್ಟಿ ಕಕ್ವಗುತ್ತು, ಕರ್ನೀರೆ ವಿಶ್ವನಾಥ ಶೆಟ್ಟಿ, ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ರಾಜೇಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಗಂಗಾಧರ ವಿ.ಶೆಟ್ಟಿ, ಜೊತೆ ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಯುವ ವಿಭಾಗದ ದಾಮೋದರ ಶೆಟ್ಟಿ, ಮಹಿಳಾ ವಿಭಾಗದ ಚಂದ್ರಕಲಾ ಎಸ್ ಶೆಟ್ಟಿ, ಪ್ರಚಾರ ವಿಭಾಗದ ನಿಶಾಂತ್ ಶೆಟ್ಟಿ ಕಿಲೆಂಜೂರು, ಶರತ್ ಶೆಟ್ಟಿ ಸಂಕಲಕರಿಯ,ಶ್ರೀಶ ಐಕಳ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಯನ್ನು ಮಂಗಳೂರಿನ ಶ್ರೀ ದೇವಿ ಎಜುಕೇಷನ್ ಟ್ರಸ್ಟ್ ನ ಆಡಳಿತ ನಿರ್ದೇಶಕ ಎ ಸದಾನಂದ ಶೆಟ್ಟಿಯವರಿಗೆ ನೀಡಿ ಗೌರವಿಸಲಾಯಿತು. ಹಾಗೂ ಸಾಧಕರ ನೆಲೆಯಲ್ಲಿ ಕರುಣಾಕರ ಶೆಟ್ಟಿ ಉಳೆಪಾಡಿ, ಮುಗೇರಬೆಟ್ಟು(ಕೃಷಿ ಕ್ಷೇತ್ರ), ಸಾಯಿನಾಥ ಶೆಟ್ಟಿ (ಶಿಕ್ಷಣ ಕ್ಷೇತ್ರ), ಹರಿಪ್ರಸಾದ್ ಶೆಟ್ಟಿ (ಪಿ ಎಚ್ ಡಿ ಪ್ರಾಣಿಶಾಸ್ತ್ರ ವಿಭಾಗ), ನಿಹಾರಿಕಾ ಶೆಟ್ಟಿ ಮಾನಂಪಾಡಿ (ಕ್ರೀಡಾ ಕ್ಷೇತ್ರ) ರವರನ್ನು ಗೌರವಿಸಲಾಯಿತು. ಬಳಿಕ ಡಾ.ಸಾಯಿ ಗೀತಾ ಹೆಗ್ಡೆ ರವರಿಂದ ಆಟಿದ ತಮ್ಮನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವ ವಿದ್ಯಾರ್ಥಿವೇತನ ಕಾರ್ಯಕ್ರಮ ನಡೆಯಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…