ಕಟೀಲು : ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ರಕ್ಷಣೆಯ ಅಗತ್ಯವಿದೆ ಎಂದು ವಿದ್ವಾಂಸ ಡಾ. ಶಿಕಾರಿಪುರ ಕೃಷ್ಣಮೂರ್ತಿ ಹೇಳಿದರು.
ಅವರು ಭಾನುವಾರ ಕಟೀಲು ಸಾನ್ನಿದ್ಯ ಸಭಾಭವದಲ್ಲಿ ನಡೆದ ನಂದಿನಿ ಬ್ರಾಹ್ಮಣ ಸಭಾದ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿದರು. ಧ್ಯಾನ ಸಿದ್ದಿಗಳಿಂದ, ತತ್ವ ವಿಚಾರಗಳ ಅಧ್ಯಯನ ಚಿಂತನೆಗಳಿಂದ ಸಂಘಟನೆಯಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ, ಸಾಧ್ಯವಾದಷ್ಟು ಗಾಯತ್ರೀ ಮಂತ್ರ ವಿಷ್ಣುಸಹಸ್ರನಾಮ ಸಹಿತ ಜಪ ಅನುಷ್ಟಾನುಗಳಿಂದ ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳಬೇಕು. ಮಹಿಳೆಯರೂ ಮಕ್ಕಳೂ ಲಕ್ಷ್ಮೀ ಸೋಬಾನೆ ದೇವತಾ ಶ್ಲೋಕಗಳ ಮೂಲಕ ಆಧ್ಯಾತ್ಮ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಮುಂಬೈನ ಉದ್ಯಮಿ ಜೆ.ಸಿ.ಕುಮಾರ್ , ನಂದಿನಿ ಬ್ರಾಹ್ಮಣ ಸಭಾದ ಅಧ್ಯಕ್ಷ ಡಾ. ಪದ್ಮನಾಭ ಭಟ್, ರಾಮಗೋಪಾಲ್. ಜ್ಯೋತಿ ಉಡುಪ, ಶ್ರೀಷ ಆಚಾರ್ಯ ಮತ್ತಿತರರಿದ್ದರು. ಖ್ಯಾತ ವೈದ್ಯ ಡಾ.ಭಾಸ್ಕರನಂದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ನರಹರಿ ರಾವ್, ಮಚ್ಚಾರು ರಾಘವ ರಾವ್, ಜೆ.ಸಿ.ಕುಮಾರ್ ದಂಪತಿಗಳನ್ನು ಗೌರವಿಸಲಾಯಿತು. ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಕಾವ್ಯಶ್ರೀ ಯರವನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.
ಕೊಡೆತ್ತೂರು ವೇದವ್ಯಾಸ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ದೇವೀಪ್ರಕಾಶ ರಾವ್ ವಂದಿಸಿದರು. ಗುರುಪ್ರಸಾದ್ ಭಟ್ ನಿರೂಪಿಸಿದರು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…