ವರ್ಕಾಡಿ : ಕೇರಳ ಮಾಜಿ ಮುಖ್ಯಮಂತ್ರಿ ದಿ| ಉಮ್ಮನ್ ಚಾಂಡಿ ಇವರಿಗೆ ಕಾಸರಗೋಡು ಜಿಲ್ಲಾ ಕೊಂಕಣಿ ಕ್ರೈಸ್ತರ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮವು ವರ್ಕಾಡಿಯಲ್ಲಿ ನಡೆಯಿತು.
ಕಥೊಲಿಕ್ ಸಭಾ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಸರಗೋಡು ವಲಯ ಕಥೊಲಿಕ್ ಸಭಾ ಅಧ್ಯಕ್ಷರಾದ ರಾಜು ಜೋನ್ ಡಿ ಸೊಜಾ ವಹಿಸಿದ್ದರು.
ಜಿಲ್ಲೆಯ ಕೊಂಕಣಿ ಕ್ರೈಸ್ತ ಸಮುದಾಯದ ಸರ್ವ ರಾಜಕೀಯ ಪಕ್ಷಗಳ ಮತ್ತು ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರು ಬಾಗವಹಿಸಿದ ಈ ಕಾರ್ಯಕ್ರಮದಲ್ಲಿ ವರ್ಕಾಡಿ ಇಗರ್ಜಿ ಧರ್ಮ ಗುರುಗಳಾದ ವಂ.ಬೇಸಿಲ್ ವಾಸ್ ರವರು ಮುಖ್ಯ ಅಥಿತಿಯಾಗಿದ್ದರು.
ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವಿನಾ ಮೊಂತೆರೊ, ಕುಂಬ್ಡಾಜೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಎಲಿಜಬೆತ್ ಕ್ರಾಸ್ತಾ, ನ್ಯಾಯವಾದಿ ಎಂ. ಎಸ್.ಥೋಮಸ್, ಡಿ ಸೋಜಾ, ಅಖಿಲ ಭಾರತ ಜನಾದಿಪತ್ಯ ಮಹಿಲಾ ಅಸೋಸಿಯೇಷನ್ ನ ಮಂಜೇಶ್ವರ ಏರಿಯ ಅಧ್ಯಕ್ಷೆ ಶ್ರೀಮತಿ ಐರಿನ್ ಜೊಸ್ಪಿನ್ , ಕುಂಬಳೆ ಬ್ಲಾಕ್ ಕಾಂಗ್ರೆಸ್ ಸೆಕ್ರೆಟರಿ ವಿಲ್ಫ್ರೆಡ್ ಡಿಸೊಜಾ, ಮುಂತಾದ ಗಣ್ಯರು ಉಮ್ಮನ್ ಚಾಂಡಿ ಯವರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು.
ಕಥೊಲಿಕ್ ಸಭಾ ಕೇಂದ್ರೀಯ ಕೋಶಾಧಿಕಾರಿ ಫ್ರಾನ್ಸಿಸ್ ಮೊಂತೇರೊ, ಮಾಜಿ ಅಧ್ಯಕ್ಷರಾದ ರಾಜು ಸ್ಟೀಫನ್ ಕುಂಬ್ಳಾ, ವಿಲ್ ಫ್ರೆಡ್ ಮನೋಹರ್ ಬೆಳಾ, ಕಾರ್ಯದರ್ಶಿ ಜೊಸ್ಸಿ ಬೆಳಾ, ವರ್ಕಾಡಿ ಘಟಕ ಅಧ್ದ್ಯಕ್ಷ ಯೇಸುಪ್ರಸಾದ್ ಮುಂತಾದ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…