KAR – TET ಪರೀಕ್ಷೆಗೆ ಪೂರ್ವ ತಯಾರಿ ತರಬೇತಿ ಶಿಬಿರ ಇದೇ ಬರುವ 12/08/2023 ಶನಿವಾರ ಮತ್ತು 13/08/2023 ಭಾನುವಾರದಂದು ಸೆಪ್ಟೆಂಬರ್ 3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವ ತಯಾರಿಯ ತರಬೇತಿ ಶಿಬಿರವು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ನಡೆಯಲಿದ್ದು ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ವಿದ್ಯಾಮಾತಾ ಅಕಾಡೆಮಿಯ ಆಡಳಿತ ಮಂಡಳಿಯು ತಿಳಿಸಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತು ಪಡೆದ ಅಭ್ಯರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುವುದನ್ನು ಗಮನಿಸಿರಬಹುದು. ಈ ನಿಟ್ಟಿನಲ್ಲಿ ಈ ವರ್ಷವೂ TET ನ ತರಬೇತಿಯನ್ನು ಆಯೋಜಿಸಲಾಗಿದ್ದು ತರಬೇತಿಯಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಬಿರಾರ್ಥಿಗಳಿಗೆ ಅಧ್ಯಯನಕ್ಕೆ ಸಂಬಂಧಿಸಿದ ಪೂರ್ವ ತಯಾರಿ ತರಬೇತಿ ಜೊತೆಗೆ ಸಂಪೂರ್ಣ ಅಧ್ಯಯನ ಸಾಮಗ್ರಿಗಳನ್ನು ಕೂಡ ಒದಗಿಸಲಾಗುತ್ತದೆ. ಶಿಬಿರವು ಶನಿವಾರ ಮತ್ತು ಭಾನುವಾರದಂದು ಬೆಳಿಗ್ಗೆ 10:೦೦ ರಿಂದ ಸಾಯಂಕಾಲ 4:೦೦ ರವರೆಗೆ ನಡೆಯಲಿರುವುದು. ದೂರದ ಊರಿನಿಂದ ಆಗಮಿಸುವವರಿಗೆ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ:
ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎಪಿಯಂಸಿ ರಸ್ತೆ, ಪುತ್ತೂರು (ದ. ಕ)
ಪೊ. ನಂ: 9620468869
ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…