ಜನ ಮನದ ನಾಡಿ ಮಿಡಿತ

Advertisement

ದೇಶದಲ್ಲಿ ಕಾರ್ಯಚರಿಸುತ್ತಿದೆ ‘ನಕಲಿ’ ವಿಶ್ವವಿದ್ಯಾಲಯಗಳು ; ಯುಜಿಸಿ ಯಿಂದ ಮಹತ್ವದ ಮಾಹಿತಿ ಲಭ್ಯ..!

ದೇಶದ ವಿವಿಧ ಭಾಗಗಳಲ್ಲಿ ಹಲವು ‘ನಕಲಿ’ ವಿಶ್ವವಿದ್ಯಾಲಯಗಳು ಕಾರ್ಯಚರಿಸುತ್ತಿದೆ ಎಂಬುವುದನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಅಥವಾ ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಗುರುಸಿದೆ.


‘ನಕಲಿ’ ವಿಶ್ವವಿದ್ಯಾಲಯಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿರುವುದಿಲ್ಲ, ಒಂದು ವೇಳೆ ನಕಲಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಕಲಿಯುತ್ತಿದ್ದರೆ ಅವರಿಗೆ ದೊರಕುವ ಪ್ರಮಾಣ ಪತ್ರಗಳಿಗೆ ಯಾವುದೇ ವ್ಯಾಲ್ಯೂ ಇರುವುದಿಲ್ಲ. ಜೊತೆಗೆ ಯಾವುದೇ ಉದ್ಯೋಗ ಅಥವಾ ತತ್ಸಮಾನ ಸಂಬ0ಧಗಳಿಗೆ ಅರ್ಹವಾಗಿರುವುದಿಲ್ಲ ಎಂದು ಆಯೋಗ ಹೇಳಿದೆ.
ಇತ್ತೀಚೆಗೆ ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಗುರುತಿಸಿರುವ ಹಲವು ನಕಲಿ ವಿಶ್ವವಿದ್ಯಾಲಯಗಳು ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿದ್ದು, ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿ ಪದವಿಗಳನ್ನ ನೀಡುವ ಹಲವಾರು ವಿಶ್ವವಿದ್ಯಾಲಯಗಳನ್ನ ಆಯೋಗವು ಗುರುತಿಸಿದೆ.


ಅಂತಹ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನ ಉನ್ನತ ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಗುರುತಿಸಲಾಗುವುದಿಲ್ಲ ಅಥವಾ ಮಾನ್ಯವಾಗುವುದಿಲ್ಲ ಎಂದು ಯುಜಿಸಿಯಿಂದ ಮಾಹಿತಿ ಲಭ್ಯವಾಗಿದೆ.
ಯುಜಿಸಿ ಅಧಿಕೃತ ನೋಟಿಸ್‌ನಲ್ಲಿ, “ರಾಜ್ಯ ಕಾಯ್ದೆ ಅಥವಾ ಕೇಂದ್ರ ಕಾಯ್ದೆ ಅಥವಾ ಪ್ರಾಂತೀಯ ಕಾಯ್ದೆಯಡಿ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು / ಸಂಸ್ಥೆಗಳು ಅಥವಾ ಯುಜಿಸಿ ಕಾಯ್ದೆ, 1956 ರ ಪ್ರಕಾರ ಪದವಿಗಳನ್ನು ನೀಡಲು ಅಥವಾ ಅಧಿಕಾರ ಹೊಂದಿರುವ ಸಂಸ್ಥೆಗಳಿ0ದ ಮಾತ್ರ ಪದವಿಯನ್ನು ನೀಡಬಹುದು ಎಂದು ವಿದ್ಯಾರ್ಥಿಗಳ, ಪೋಷಕರ ಮತ್ತು ಸಾರ್ವಜನಿಕರ ಗಮನಕ್ಕೆ ತರಲಾಗಿದೆ”


ಆದಾಗ್ಯೂ, ಯುಜಿಸಿ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿ ಹಲವಾರು ಸಂಸ್ಥೆಗಳು ಪದವಿಗಳನ್ನು ನೀಡುತ್ತಿರುವುದು ಯುಜಿಸಿಯ ಗಮನಕ್ಕೆ ಬಂದಿದ್ದು, ಅಂತಹ ವಿಶ್ವವಿದ್ಯಾಲಯಗಳು ನೀಡುವ ಪದವಿಗಳನ್ನು ಉನ್ನತ ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಗುರುತಿಸಲಾಗುವುದಿಲ್ಲ ಅಥವಾ ಮಾನ್ಯವಾಗುವುದಿಲ್ಲ ಎಂದು ನೋಟಿಸ್’ನಲ್ಲಿ ತಿಳಿಸಿದೆ.
ಇಂತಹ ನಕಲಿ ವಿಶ್ವವಿದ್ಯಾನಿಲಯಗಳ ಹೆಸರುಗಳನ್ನು ಶೀಘ್ರದಲ್ಲಿ ಬಹಿರಂಗಪಡಿಸಲಾಗುವುದು ಎಂದು ಯುಜಿಸಿ ತಿಳಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!