ದೇಶದ ವಿವಿಧ ಭಾಗಗಳಲ್ಲಿ ಹಲವು ‘ನಕಲಿ’ ವಿಶ್ವವಿದ್ಯಾಲಯಗಳು ಕಾರ್ಯಚರಿಸುತ್ತಿದೆ ಎಂಬುವುದನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಅಥವಾ ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಗುರುಸಿದೆ.
‘ನಕಲಿ’ ವಿಶ್ವವಿದ್ಯಾಲಯಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿರುವುದಿಲ್ಲ, ಒಂದು ವೇಳೆ ನಕಲಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಕಲಿಯುತ್ತಿದ್ದರೆ ಅವರಿಗೆ ದೊರಕುವ ಪ್ರಮಾಣ ಪತ್ರಗಳಿಗೆ ಯಾವುದೇ ವ್ಯಾಲ್ಯೂ ಇರುವುದಿಲ್ಲ. ಜೊತೆಗೆ ಯಾವುದೇ ಉದ್ಯೋಗ ಅಥವಾ ತತ್ಸಮಾನ ಸಂಬ0ಧಗಳಿಗೆ ಅರ್ಹವಾಗಿರುವುದಿಲ್ಲ ಎಂದು ಆಯೋಗ ಹೇಳಿದೆ.
ಇತ್ತೀಚೆಗೆ ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಗುರುತಿಸಿರುವ ಹಲವು ನಕಲಿ ವಿಶ್ವವಿದ್ಯಾಲಯಗಳು ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿದ್ದು, ಯೂನಿವರ್ಸಿಟಿ ಗ್ರಾಂಟ್ ಕಮಿಷನ್ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿ ಪದವಿಗಳನ್ನ ನೀಡುವ ಹಲವಾರು ವಿಶ್ವವಿದ್ಯಾಲಯಗಳನ್ನ ಆಯೋಗವು ಗುರುತಿಸಿದೆ.
ಅಂತಹ ವಿಶ್ವವಿದ್ಯಾಲಯಗಳಿಂದ ಪದವಿಗಳನ್ನ ಉನ್ನತ ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಗುರುತಿಸಲಾಗುವುದಿಲ್ಲ ಅಥವಾ ಮಾನ್ಯವಾಗುವುದಿಲ್ಲ ಎಂದು ಯುಜಿಸಿಯಿಂದ ಮಾಹಿತಿ ಲಭ್ಯವಾಗಿದೆ.
ಯುಜಿಸಿ ಅಧಿಕೃತ ನೋಟಿಸ್‌ನಲ್ಲಿ, “ರಾಜ್ಯ ಕಾಯ್ದೆ ಅಥವಾ ಕೇಂದ್ರ ಕಾಯ್ದೆ ಅಥವಾ ಪ್ರಾಂತೀಯ ಕಾಯ್ದೆಯಡಿ ಸ್ಥಾಪಿಸಲಾದ ವಿಶ್ವವಿದ್ಯಾಲಯಗಳು / ಸಂಸ್ಥೆಗಳು ಅಥವಾ ಯುಜಿಸಿ ಕಾಯ್ದೆ, 1956 ರ ಪ್ರಕಾರ ಪದವಿಗಳನ್ನು ನೀಡಲು ಅಥವಾ ಅಧಿಕಾರ ಹೊಂದಿರುವ ಸಂಸ್ಥೆಗಳಿ0ದ ಮಾತ್ರ ಪದವಿಯನ್ನು ನೀಡಬಹುದು ಎಂದು ವಿದ್ಯಾರ್ಥಿಗಳ, ಪೋಷಕರ ಮತ್ತು ಸಾರ್ವಜನಿಕರ ಗಮನಕ್ಕೆ ತರಲಾಗಿದೆ”
ಆದಾಗ್ಯೂ, ಯುಜಿಸಿ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿ ಹಲವಾರು ಸಂಸ್ಥೆಗಳು ಪದವಿಗಳನ್ನು ನೀಡುತ್ತಿರುವುದು ಯುಜಿಸಿಯ ಗಮನಕ್ಕೆ ಬಂದಿದ್ದು, ಅಂತಹ ವಿಶ್ವವಿದ್ಯಾಲಯಗಳು ನೀಡುವ ಪದವಿಗಳನ್ನು ಉನ್ನತ ಶಿಕ್ಷಣ ಮತ್ತು ಉದ್ಯೋಗ ಉದ್ದೇಶಗಳಿಗಾಗಿ ಗುರುತಿಸಲಾಗುವುದಿಲ್ಲ ಅಥವಾ ಮಾನ್ಯವಾಗುವುದಿಲ್ಲ ಎಂದು ನೋಟಿಸ್’ನಲ್ಲಿ ತಿಳಿಸಿದೆ.
ಇಂತಹ ನಕಲಿ ವಿಶ್ವವಿದ್ಯಾನಿಲಯಗಳ ಹೆಸರುಗಳನ್ನು ಶೀಘ್ರದಲ್ಲಿ ಬಹಿರಂಗಪಡಿಸಲಾಗುವುದು ಎಂದು ಯುಜಿಸಿ ತಿಳಿಸಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…