ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ.

ಮಧ್ಯಾಹ್ನದ ವೇಳೆಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರಿsಸುವ ಸಾಧ್ಯಾತೆಯಿದ್ದು, ಥೈಲ್ಯಾಂಡ್‌ನಲ್ಲಿ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಸ್ಪಂದನಾ ಮೃತದೇಹ ಸ್ಥಳಾಂತರ ಮಾಡಲಿದ್ದಾರೆ.
ಮಧ್ಯಾಹ್ನದ ವೇಳೆಗೆ ಥೈಲ್ಯಾಂಡ್‌ನಿ0ದ ಇಂಡಿಗೋ ವಿಮಾನದಲ್ಲಿ ಇಲ್ಲವೇ ಥಾಯ್ ಏರ್ ಲೈನ್ಸ್ ನಲ್ಲಿ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ.
ಇಂದು ರಾತ್ರಿ ಬೆಂಗಳೂರಿಗೆ ಸ್ಪಂದನಾ ಮೃತದೇಹ ತಲುಪಿ, ಅಲ್ಲಿಂದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ನಾಳೆ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.



