ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ..! ಮಹಿಳೆಯ ಮಾನಭಂಗಕ್ಕೆ ಯತ್ನ ; ಪ್ರಕರಣ ದಾಖಲು

ಕಂಬಳಬೆಟ್ಟು : ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾನಭಂಗ ಯತ್ನ ನಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಂಬಳಬೆಟ್ಟು ಕಾಂಪ್ಲೆಕ್ಸ್ನಲ್ಲಿ ವಾಸವಿರುವ ಜೈನುಲ್ ಅಬೀದ್ ಅವರ ಪತ್ನಿ ಆಯಿಶನ್ ಮುಬೀನಾ ಅವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಅದೇ ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಆರೋಪಿಗಳಾದ ಹನ್ನತ್ ಆಕೆಯ ಸಹೋದರಿ, ಆಕೆಯ ತಾಯಿ, ಹಾಗೂ ಹನ್ನತ್ ಮಾಡನ ವಿರುದ್ಧ ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
ವಿಟ್ಲಮುನ್ನೂರು ಗ್ರಾಮದ ಕಂಬಳಬೆಟ್ಟು ಕಾಂಪ್ಲೆಕ್ಸ್ನಲ್ಲಿ ವಾಸವಿರುವ ಮುಬೀನಾ ತನ್ನ ತವರು ಮನೆಗೆ ಹೋಗಲು ಹೊರಡುತ್ತಿದ್ದ ಸಮಯ ನೆರೆ ಮನೆಯ ನಿವಾಸಿ ಹನ್ನತ್ ಮಗಳಾದ ಮಹದಿಗೆ ಕೆಟ್ಟ ಶಬ್ದಗಳಿಂದ ಬೈಯುತ್ತಿದ್ದರು. ಈ ಬಗ್ಗೆ ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಹನ್ನತ್‌ನ ಮಾವ ಮೈಮೇಲೆ ಕೈ ಹಾಕಿ ಬುರ್ಖಾವನ್ನು ಹರಿದು ಹಾಕಿ, ಮಾನಭಂಗ ಯತ್ನಿಸಿದ್ದು ಆ ಸಮಯ ಮುಬೀನಾ ನೆಲಕ್ಕೆ ಬಿದ್ದಾಗ ಹೊಟ್ಟೆಗೆ ಹನ್ನತ್ ಮತ್ತು ಆಕೆಯ ತಾಯಿ ಕಾಲಿನಿಂದ ತುಳಿದುದರಿಂದ ಗಾಯಗೊಂಡಿರುತ್ತಾರೆ.
ಗಾಯಾಳುಗಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!