ದಕ್ಷಿಣ ಕನ್ನಡ : ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಭವಾನಿ ಇವರು ಇತ್ತೀಚೆಗೆ ಚೀನಾದಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಅಪ್ರತಿಮ ಸಾಧನೆಯನ್ನು ಮಾಡಿದ್ದಾರೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟು ಭವಾನಿ ಯಾದವ್ ಭಗವತಿ ಇವರು ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮಂಗಳೂರು ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಮತ್ತು ದೇಶಕ್ಕೆ ಹೆಮ್ಮೆಯ ಸುಪುತ್ರಾಗಿ ಕೀರ್ತಿಯನ್ನು ತಂದಿದ್ದಾರೆ ಭವಾನಿ ಇವರು ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಭಾಗವಹಿಸಿ, ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಟ್ರ್ಯಾಕ್ ಮತ್ತು ಫೀಲ್ಡ್ ಇವುಗಳಲ್ಲಿ ಭಾರತಕ್ಕೆ ಪದಕ ತಂದುಕೊಟ್ಟ ಮೂರನೇ ಕ್ರೀಡಾಪಟು ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ.
ಕಳೆದ ಬಾರಿ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಲಾಂಗ್ ಜಂಪಿನಲ್ಲೂ ಅಪ್ರತಿಮ ಸಾಧನೆ ಸಾಧಿಸಿದ ಭವಾನಿ ಇವರು ಅಲ್ಲೂ ಕಂಚಿನ ಪದಕ ಗೆದ್ದಿದ್ದು ಗಮನಾರ್ಹ ದೇಶದ ಸುಮಾರು 1025 ಯೂನಿವರ್ಸಿಟಿಗಳ ಆಯ್ಕೆಯಾದ 85 ಕ್ರೀಡಾಪಟುಗಳು ಸ್ಪರ್ಧಾಕೂಟದಲ್ಲಿ ಪಾಲ್ಗೊಂಡಿದ್ದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ 8 ಕ್ರೀಡಾಪಟುಗಳು ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಭವಾನಿ ಹಾಗೂ ಇತರ ಕ್ರೀಡಾಪಟುಗಳ ಕೋಚ್ ಅಜಿತ್ ರವರ ಮಾರ್ಗದರ್ಶನ ಮತ್ತು ಪ್ರೋತ್ಸಾಹಕ್ಕಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾಕ್ಟರ್ ಮೋಹನ ಆಳ್ವಾರವರು ಭವಾನಿ ಹಾಗೂ ಇತರ ಕ್ರೀಡಾಪಟುಗಳು ಮತ್ತು ಕೋಚ್ ಇವರನ್ನು ಅಭಿನಂದಿಸಿದ್ದಾರೆ ಹಾಗೂ ಮುಂದಿನ 15ನೇ ತಾರೀಖಿನಂದು ಸಾಧನೆ ಮಾಡಿದ ಭವಾನಿ ಮತ್ತು ಕೋಚ್ ಅಜಿತ್ ಇವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.





