ಜನ ಮನದ ನಾಡಿ ಮಿಡಿತ

Advertisement

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ; ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ
ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ

ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಐಕಳ ಹರೀಶ್ ಶೆಟ್ಟಿ ಮಾತನಾಡಿದರು.

ಅಕ್ಟೋಬರ್ 28 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಜರಗಲಿದೆ. ಅಕ್ಟೋಬರ್ 29 ರಂದು ಉಡುಪಿಯ ಅಂಬಾಗಿಲು ಅಮೃತ ಗಾರ್ಡನ್ ನಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ನಡೆಯಲಿದೆ.
ಸಮಾಜ ಬಾಂಧವರನ್ನು ಒಂದೇ ಸೂರಿನಡಿಯಲ್ಲಿ ಸೇರಿಸುವ ಉದ್ದೇಶದಿಂದ ವಿಶ್ವ ಬಂಟರ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಮಿತಿಗಳನ್ನು ರಚಿಸಲಾಗುತ್ತದೆ. ಜೊತೆಗೆ ಕಾರ್ಯಕ್ರಮದಲ್ಲಿ ಯುವಕ ಯುವತಿಯರನ್ನು ಸೇರಿಸಿ ಯುವ ವಿಭಾಗ ಸಮಿತಿಯನ್ನು ರಚಿಸಲಾಗುವುದು. ಮಹಿಳೆಯರ ಪ್ರತ್ಯೇಕ ಘಟಕ ರಚನೆಯಾಗಲಿದೆ.


ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದರು.
ಸಾಂಸ್ಕೃತಿಕ ಸಮಿತಿಯ ಸಂಚಾಲಕರನ್ನಾಗಿ ಚಂದ್ರಹಾಸ ಶೆಟ್ಟಿ ರಂಗೋಲಿ, ಉಪ ಸಂಚಾಲಕರಾಗಿ ಕರ್ನೂರು ಮೋಹನ್ ರೈ, ಹಾಗೂ ಕ್ರೀಡಾ ಸಮಿತಿಯ ಸಂಚಾಲಕರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್, ಉಪ ಸಂಚಾಲಕರಾಗಿ ರೋಶನ್ ಕುಮಾರ್ ಶೆಟ್ಟಿ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಜೊತೆಗೆ ಉಪಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಯಿತು. ಊಟೋಪಚಾರದ ಸಮಿತಿ ಸಂಚಾಲಕರಾಗಿ ಉಡುಪಿ ಸಂತೋಷ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಮಾಧ್ಯಮ‌ ಸಮಿತಿಗೆ ಸಂಚಾಲಕರನ್ನಾಗಿ ಬಾಳ ಜಗನ್ನಾಥ ಶೆಟ್ಟಿ ಮತ್ತು ರಾಜೇಶ್ ಶೆಟ್ಟಿ ಉಡುಪಿ ಅವರನ್ನು ಆಯ್ಕೆ ಮಾಡಲಾಯಿತು. ಸಮಾರಂಭದಲ್ಲಿ ಸಾಧಕರಿಗೆ ಗೌರವ, ಯಕ್ಷಗಾನ ಮೇಳಗಳ ಯಜಮಾನರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.


ಅದೇ ರೀತಿ, ರಾಜಕಾರಣಿಗಳು, ಸಿನಿಮಾ ತಾರೆಯರನ್ನು ಸಮಾರಂಭಕ್ಕೆ ಆಹ್ವಾನಿಸಲು ತೀರ್ಮಾನಿಸಲಾಯಿತು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ ವಿಶ್ವ ಬಂಟರ ಸಮ್ಮಿಲನ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ವಲಯ, ತಾಲೂಕು ಬಂಟರ ಸಂಘಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗಿದೆ ಎಂದರು.
ವೇದಿಕೆಯಲ್ಲಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರ ಹಾಸ ಶೆಟ್ಟಿ ರಂಗೋಲಿ, ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಸಾಲೆತ್ತೂರು ಬಂಟರ ಸಂಘದ ಅಧ್ಯಕ್ಷ ದೇವಪ್ಪ ಶೇಖ, ಗುರುಪುರ ಬಂಟರ ಮಾತೃಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಕುಕ್ಕುಂದೂರು ಬಂಟರ ಸಂಘದ ಅಧ್ಯಕ್ಷ ರವಿ ಶೆಟ್ಟಿ, ತೋನ್ಸೆ ಬಂಟರ ಸಂಘದ ಅಧ್ಯಕ್ಷ ಮನೋಹರ ಶೆಟ್ಟಿ, ಉಡುಪಿ ಜಿಲ್ಲಾ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ರೋಶನ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಸುದರ್ಶನ್ ಶೆಟ್ಟಿ ಗುರುಪುರ, ಮೋಹನ್ ಶೆಟ್ಟಿ ಉಡುಪಿ, ಪ್ರಕಾಶ್ ಶೆಟ್ಟಿ ಪಡುಬಿದ್ರೆ, ಸತ್ಯ ಪ್ರಕಾಶ್ ಶೆಟ್ಟಿ ಜಪ್ಪು, ಪುಷ್ಪರಾಜ ಶೆಟ್ಟಿ ಕುಡುಂಬೂರು, ಶಮೀನಾ ಆಳ್ವ, ಕೊಲ್ಲಾಡಿ ಬಾಲಕೃಷ್ಣ ರೈ, ಬಾಳ ಜಗನ್ನಾಥ ಶೆಟ್ಟಿ, ಜೀವನ್ ಮುಲ್ಕಿ, ಸಾಯಿನಾಥ ಶೆಟ್ಟಿ, ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲು, ರವಿ ಶೆಟ್ಟಿ ಜತ್ತಬೆಟ್ಟು, ಶರತ್ ಶೆಟ್ಟಿ ಕಿನ್ನಿಗೋಳಿ, ನಿಶಾಂತ್ ಶೆಟ್ಟಿ ಕಿಲೆಂಜೂರು, ರೋಹಿನಿ ಶೆಟ್ಟಿ, ಅಮೂಲ್ಯ ಶೆಟ್ಟಿ ಕಟೀಲು, ಭಾರತಿ ಶೆಟ್ಟಿ ಮೊದಲಾದವರು ಸಲಹೆ ಸೂಚನೆಗಳನ್ನು ನೀಡಿದರು.
ಆಗೋಸ್ಟ್ 11 ರಂದು ಸಂಜೆ ನಾಲ್ಕು ಗಂಟೆಗೆ ಉಡುಪಿಯ ಅಂಬಾಗಿಲು ಅಮೃತ ಗಾರ್ಡನ್ ನಲ್ಲಿ ವಿಶ್ವ ಬಂಟರ ಸಮ್ಮೇಳನದ ಕುರಿತು ಸಭೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!