11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ಅತ್ಯಾಚಾರವಾಗಿ ಸಾವನ್ನಪ್ಪಿದ ಸೌಜನ್ಯಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ನೈಜ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿ, ಹಿಂದು ಹೋರಾಟ ಸಮಿತಿ ವಿಟ್ಲ ತಾಲೂಕು ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನಡೆದಿದೆ.

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಆ.20 ರ ಆದಿತ್ಯವಾರದಂದು ವಿಟ್ಲ ಜಂಕ್ಷನ್ ಬಳಿ ಬೃಹತ್ ಪ್ರತಿಭಟನಾ ಸಭೆ ನೆಡೆಯಲಿದ್ದು, ಸಹಸ್ರರಾರು ಸಂಖ್ಯೆಯಲ್ಲಿ ಜನರು ಆಗಮಿಸಿ, ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಬೇಕಾಗಿ ಹಿಂದು ಹೋರಾಟ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.



