ಮುಲ್ಕಿ: ಪಡಪಣಂಬೂರು ಗ್ರಾಮ ಪಂಚಾಯತಿ ವತಿಯಿಂದ ನಿಧಿ 1ರ ಶೇಕಡ 25 ಅನುದಾನದ ಅಡಿ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ 148 ಫಲಾನುಭವಿಗಳಿಗೆ ಚಯರ್ ವಿತರಣಾ ಸಮಾರಂಭ ಪಂಚಾಯಿತಿಯಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಪಂಚಾಯತಿಯಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು ಸರಕಾರದ ಸೌಲಭ್ಯಗಳನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಿ ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಕುಸುಮ,ಮಾಜೀ ಅಧ್ಯಕ್ಷರಾದ ವಿನೋದ್ ಸಾಲ್ಯಾನ್, ಮೋಹನ್ ದಾಸ್, ಸದಸ್ಯರಾದ ಹೇಮನಾಥ, ಹರಿಪ್ರಸಾದ್, ದಿನೇಶ್ ಹೊಸಲಕ್ಕೆ, ಪಂಚಾಯತ್ ಪಿಡಿಒ ಹಾಗೂ ಕಾರ್ಯದರ್ಶಿ ಮತ್ತಿತರರು ಉಪಸ್ಥಿತರಿದ್ದರು.



