ಪುತ್ತೂರು: ಪುತ್ತೂರು ಬಂಟರ ಸಂಘದ ಆಶ್ರಯದಲ್ಲಿ “ಆಟಿಡೊಂಜಿ ದಿನ-2023”ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಆಯೋಜನೆ.
ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶನದಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಮತ್ತು ಯುವ, ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ “ಆಟಿಡೊಂಜಿ ದಿನ-2023” ಆ.13 ಭಾನುವಾರ ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಗತಿಪರ ಕೃಷಿಕ ಅರುಣ್ ಕುಮಾರ್ ರೈ ಆನಾಜೆ, ಮಕ್ಕಳ ತಜ್ಞ ಡಾ.ಮಂಜುನಾಥ ಶೆಟ್ಟಿ, ಸಮಾಜ ಸೇವಕ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಸಹಕಾರಿ ಸಾಧಕ ಎಸ್.ಬಿ.ಜಯರಾಮ ರೈ ಬಳಜ್ಜ, ಉದ್ಯಮಿ ಕರುಣಾಕರ ರೈ ದೇರ್ಲ, ಮಾಜಿ ಸೈನಿಕ ಕರುಣಾಕರ ರೈ ಪಡ್ಯಂಬೆಟ್ಟು, ಕ್ರೀಡಾಪಟು ದಯಾನಂದ ರೈ ಕೋರ್ಮಂಡ, ನಿವೃತ್ತ ಶಿಕ್ಷಕ ಹೆಚ್.ಶ್ರೀಧರ ರೈ ಹೊಸಮನೆ, ಕು.ಸಮೃದ್ಧಿ ರೈ ಮಾದೋಡಿ, ಕು.ಸ್ವಸ್ತಿಕ ಪಿ.ಆರ್. ಪಿಜಕ್ಕಳ ದೋಲ್ಪಾಡಿ ಅವರಿಗೆ ಪ್ರಾಯೋಜಕರಿಂದ ಕೊಡುಗೆಯಾಗಿ ನೀಡಿದ ಚಿನ್ನದ ಪದಕ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಧ್ವಜಾರೋಹಣ ಮಾಡಲಿದ್ದು, ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಕುಮಾರ್ ರೈ ದುಗ್ಗಳ ದೀಪ ಪ್ರಜ್ವಲನೆ ಮಾಡುವರು. ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ರೈ ಇಳಂತಾಜೆ ಆಟಿದ ಕೂಟವನ್ನು ಉದ್ಘಾಟಿಸುವರು. ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಆಟಿದ ಕೂಟದ ಚಾವಡಿ ಕುರಿತು ಮಾತನಾಡುವರು ಎಂದು ತಿಳಿಸಿದರು.
ನಡೆಯವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ವಹಿಸುವರು. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು. ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸನ್ಮಾನಿಸುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನಿರಂಜನ ರೈ ಮಠಂದತಬೆಟ್ಟು ಆಶಯ ಮಾತುಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಹಿರಿಯ ಉದ್ಯಮಿ ಸುಂದರ ರೈ ಸವಣೂರು ಪಾಲ್ಗೊಳ್ಳಲಿದ್ದಾರೆ. ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಎನ್.ಜಗನ್ನಾಥ ರೈ ಅರಿಯಡ್ಕ,, ಲಕ್ಷ್ಮೀನಾರಾಯಣ ಶೆಟ್ಟಿ ಅರಿಯಡ್ಕ, ನಿಕಟಪೂರ್ವ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮಹಿಳಾ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳದಡ್ಡ ಗೌರವ ಉಪಸ್ಥಿತರಿರುವರು ಎಂದು ಅವರು ಹೇಳಿದರು.
ಬಂಟರ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಜಗಜ್ಜಿವನ್ ದಾಸ್ ರೈ, ಉಮಾಪ್ರಸಾದ್ ರೈ, ಮಹಿಳಾ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…