ಮುಲ್ಕಿ: ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಮತ್ತು ಘಾಟ್ಗೆ ಕರ್ಕೇರ ಪವರ್ ಇಂಡಸ್ಟ್ರೀಸ್ ಮತ್ತು
ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ. ಎಸ್ ರಾವ್ ನಗರ ಇವರ ಜಂಟಿ ಆಶ್ರಯದಲ್ಲಿ ಎ. ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆದಿತ್ಯವಾರದಂದು ನೆರವೇರಿಸಲಾಯ್ತು.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ (ಜನರಲ್ ಚಿಕಿತ್ಸೆ), ಕಿವಿ ಮೂಗು ಮತ್ತು ಗಂಟಲು (ENT) ತಪಾಸಣೆ, ಚರ್ಮರೋಗ ತಪಾಸಣೆ,ಕಣ್ಣಿನ ತಪಾಸಣೆ, ಮಧುಮೇಹ ರಕ್ತದ ಒತ್ತಡ ತಪಾಸಣೆ, ಹೃದಯ ಸಂಬಂಧಿ ರೋಗ ತಪಾಸಣೆ (ECG) ಗಳನ್ನು ನೆರವೇರಿಸಲಾಯಿತು.
ವೈದ್ಯಕೀಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷರಾದ ಶ್ರೀ ಶೇಖರ್ ಕೆ ಕರ್ಕೇರರವರು ವಹಿಸಿ ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ಬಡಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಬಡಜನರ ಸೇವೆ ನಿರಂತರವಾಗಿ ನಡೆಯುತ್ತಿರಬೇಕು. ಅವರಿಗೆ ನೀಡುವ ಸೇವೆಯಲ್ಲಿ ನಾವು ಭಗವಂತನನ್ನು ಕಾಣಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ ಎಸ್ ರಾವ್ ನಗರ ಇಲ್ಲಿನ ಗೌರವಾಧ್ಯಕ್ಷರಾದ ಶ್ರೀ ರಾಘವ ಎ. ಸುವರ್ಣರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಗ್ರಾಮೀಣ ಭಾಗದಲ್ಲಿ ಜನರಿಗೆ ಸೇವೆಯನ್ನು ನೀಡುತ್ತಿರುವ ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ಕೆಲಸ ಕಾರ್ಯಗಳಿಗೆ ಅಭಿನಂದನೆಯನ್ನು ಸೂಚಿಸಿದರು. ಕಲಿಯುವಿಕೆಯಲ್ಲಿ ಉತ್ತಮ ಸಾಧನೆಯನ್ನು ತೋರಿರುವ ಐದು ಜನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನ ಚೆಕ್ಕುಗಳನ್ನು ಹಸ್ತಾಂತರಿಸಲಾಯಿತು.
ಎ.ಜೆ ಆಸ್ಪತ್ರೆಯ ವೈದ್ಯಕೀಯ ತಂಡದ ಶ್ರೀ ರಾಜೇಶ್ ರವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಕೆ ಎಸ್ ರಾವ್ ನಗರ ಇಲ್ಲಿನ ಅಧ್ಯಕ್ಷರಾದ ಶ್ರೀ ಮಹಾಬಲ ಎನ್. ಸನಿಲ್ ಮತ್ತು ಮಹಿಳಾ ಅಧ್ಯಕ್ಷರಾದ ಶ್ರೀಮತಿ ಚಂದ್ರಾಕ್ಷಿ ಎಸ್. ಸಾಲ್ಯಾನ್ ಮತ್ತು ಎಜೆ ಆಸ್ಪತ್ರೆ ಮಂಗಳೂರು ಇಲ್ಲಿನ ಮೆಡಿಸಿನ್ ವಿಭಾಗದ ಮುಖ್ಯಸ್ಥೆಯಾದ ಡಾ. ಹೀರಲ್ ರವರು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಒಟ್ಟು 156 ಶಿಬಿರಾರ್ಥಿಗಳು ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮವನ್ನು ಶ್ರೀ ಹರಿಶ್ಚಂದ್ರ ಎಸ್. ಕೋಟ್ಯಾನ್ ರವರು ಸ್ವಾಗತಿಸಿ ಶ್ರೀಮತಿ ಚಂದ್ರಿಕಾ ಅಂಚನ್ ಮತ್ತು ಶ್ರೀಮತಿ ರಂಜಿತಾ ಹರಿಶ್ಚಂದ್ರ ಎಸ್. ಕೋಟ್ಯಾನ್ ರವರು ಪ್ರಾರ್ಥನೆಯನ್ನು ನೆರವೇರಿಸಿದರು, ಶ್ರೀಮತಿ ಚಂದ್ರಿಕಾ ಅಂಚನ್ ರವರು ಧನ್ಯವಾದವನ್ನು ಸಮರ್ಪಿಸಿದರು. ಸ್ವರ್ಣ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಭಾಸ್ಕರ್ ಅಮೀನ್ ತೋಕೂರು ಕಾರ್ಯಕ್ರಮವನ್ನು ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…