ಮೂಡುಬಿದಿರೆ: ಕಿನ್ನಿಗೋಳಿ – ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೂರುಕಾವೇರಿಯಲ್ಲಿ ಟಿಪ್ಪರ್‌ಗೆ ಕಾರು ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ನಿನ್ನೆ ಸಂಭವಿಸಿದೆ. ಬೆಳುವಾಯಿ ನಿವಾಸಿ ರಾಮಣ್ಣ (49) ಮೃತರು. ಕಾರಿನಲ್ಲಿ ರಾಮಣ್ಣ ಅವರ ಜತೆ ವಸಂತ, ಪ್ರವೀಣ್, ದಿನೇಶ್, ಆನಂದ, ಸಂಜೀವ ಅವರು ಇದ್ದರು. ಕಾರಿನಲ್ಲಿದ್ದವರ ಪೈಕಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಐಕಳ ಕಡೆಯಿಂದ ಮೂಲ್ಕಿ ಕಡೆ ಸಂಚರಿಸುತ್ತಿದ್ದ ಟಿಪ್ಪರ್‌ಗೆ, ಮೂಲ್ಕಿಯಿಂದ ಬೆಳುವಾಯಿ ಕಡೆಗೆ ಸಂಚರಿಸುತ್ತಿದ್ದ ಕಾರು ಮೂರುಕಾವೇರಿ ಸಮೀಪದಲ್ಲಿ ಢಿಕ್ಕಿ ಹೊಡೆದಿತ್ತು. ಕಾರು ಸಂಚರಿಸುವ ಸಂದರ್ಭ ರಸ್ತೆಯ ಅಂಚಿನಿಂದ ಕೆಳಗೆ ಇಳಿದಿದ್ದು, ಅಂಚಿನಿಂದ ಮೇಲೆ ಬರುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ, ಮುಂಭಾಗದಿಂದ ಬರುತ್ತಿದ್ದ ಟಿಪ್ಪರ್‌ಗೆ ಢಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಬಲ ಬದಿಗೆ ಸರಿದಿದ್ದು, ಅಪಘಾತ ತಪ್ಪಿಸಲು ಟಿಪ್ಪರ್ ಎಡಭಾಗಕ್ಕೆ ಸಂಚರಿಸಿದರೂ ಅಪಘಾತ ತಡೆಯಲು ಸಾಧ್ಯವಾಗಿಲ್ಲ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಟಿಪ್ಪರಿಗೂ ಹಾನಿಯಾಗಿದೆ. ಮೃತ ರಾಮಣ್ಣಮತ್ತು ಐವರು ಮೂಲ್ಕಿ ಕಾರ್ನಾಡಿನಲ್ಲಿ ಕೆಲಸ ಮುಗಿಸಿ ಸಂಜೆ ತಮ್ಮ ಮನೆ ಬೆಳವಾಯಿಗೆ ವಾಪಸಾಗುವ ಸಂದರ್ಭ ಅಪಘಾತ ಸಂಭವಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…