ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಟಾಕೀಸ್ ಸೀಲ್‌ಡೌನ್ ಮಾಡಲಾಗಿದೆ.
ಮೂಡುಬಿದಿರೆ: ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಚಿತ್ರಮಂದಿರವನ್ನು ಗುರುವಾರ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಸೀಲ್ ಡೌನ್ ಮಾಡಿದ್ದಾರೆ.
ದ.ಕ.ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ಈ ಬೆಳವಣಿಗೆಗಳು ನಡೆದಿವೆ. ಜನವರಿ 2021 ಕ್ಕೆ ಪರವಾನಗಿ ಅವಧಿ ಮುಕ್ತಾಯಗೊಂಡಿದ್ದು, ಆ ಬಳಿಕವೂ ಕಳೆದ 18 ತಿಂಗಳಿಂದ ಟಾಕೀಸ್ ಕಾರ್ಯನಿರ್ವಹಿಸಿತ್ತು. ಕಳೆದ ನಾಲ್ಕು ದಶಕಗಳಿಂದ ಸದಭಿರುಚಿಯ ಸಿನಿಮಾ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದ ಮೂಡುಬಿದಿರೆಯ ಈಗಿನ ಏಕೈಕ ಸಿನಿಮಾ ಟಾಕೀಸ್ ಇದೀಗ ಚಟುವಟಿಕೆ ಸ್ಥಗಿತಗೊಳಿಸುವಂತಾಗಿದೆ.
ಕಳೆದ 10 ವರ್ಷಗಳಿಂದ ಗುತ್ತಿಗೆದಾರರು ಈ ಸಿನಿಮಾ ಟಾಕೀಸ್ ನಡೆಸುತ್ತಿದ್ದು, ಸಕಾಲದಲ್ಲಿ ಅಗತ್ಯ ದಾಖಲೆಪತ್ರ ನವೀಕರಣಗೊಂಡಿಲ್ಲ. ಈ ಮಧ್ಯೆ ಟಾಕೀಸ್ ಮಾಲಕರು ಶಿಥಿಲವಾಗಿದ್ದ ಟಾಕೀಸ್ ಮೇಲ್ಬಾವಣಿ ಸಹಿತ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಂದಾಗಿದ್ದರು ಎನ್ನಲಾಗಿದೆ. ನವೀಕರಣ ಸಂಬಂಧಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತ್ತೆ ಟಾಕೀಸ್ ಕಾರ್ಯಾಚರಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…