ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ ನಲ್ಲಿ ಪತ್ತೆಯಾದ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗುರುವಾರ ಬೆಳಗ್ಗೆ ೧೧.೧೫ ರ ಸುಮಾರಿಗೆ ಮಂಗಳೂರು ರೈಲ್ವೇ ನಿಲ್ದಾಣದ ಎರಡನೇ ಫ್ಲ್ಯಾಟ್ ಫಾರಂನಲ್ಲಿ ನಿಲುಗಡೆಗೊಂಡಿದ್ದ ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ 3,16,650 ರೂಪಾಯಿ ಮೌಲ್ಯದ 6.333 ಕೇಜಿ ತೂಕದ ಒಣ ಗಾಂಜಾ ಪತ್ತೆಯಾಗಿತ್ತು. ರೈಲಿನ ನಿತ್ಯ ತಪಾಸಣೆ ವೇಳೆ ಸಿಕ್ಕ ಅನಾಮಧೇಯ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದೆ. ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಮಂಗಳೂರು ಪೂರ್ವಬಕಾರಿ ವಿಭಾಗದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಪಾಲ್ಘಾಟ್ ವಿಭಾಗದ ಸಿಐಬಿ ಮುಖ್ಯ ನಿರೀಕ್ಷಕ ಎನ್. ಕೇಸವದಾಸ್, ಮಂಗಳೂರು ಜಂಕ್ಷನ್ ಇನ್‌ಸ್ಪೆಕ್ಟರ್ ಮನೋಜ್ ಕುಮಾರ್ ಯಾದವ್, ಸಿಐಬಿ ಎಸ್‌ಐ ದೀಪಕ್ ಎ.ಪಿ., ಅಜಿತ್ ಅಶೋಕ್ ಎ.ಪಿ, ಎಎಸ್‌ಐ ಸಾಜು ಕೆ., ಎಸ್.ಎಂ. ರವಿ., ಮಂಗಳೂರು ಜಂಕ್ಷನ್ ಎಎಸ್‌ಐ ಕೆ. ಶಶಿ, ಸಿಐಬಿ ಹೆಡ್ ಕಾನ್‌ಸ್ಟೆಬಲ್ ಎನ್. ಅಶೋಕ್, ಅಜೀಶ್ ಒ.ಕೆ., ಜಂಕ್ಷನ್ ಕಾನ್‌ಸ್ಟೆಬಲ್ ಟಿ.ಪಾಂಡುರಂಗ ಭಾಗವಹಿಸಿದ್ದರು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…