ಜನ ಮನದ ನಾಡಿ ಮಿಡಿತ

Advertisement

ಅಂಗನವಾಡಿಗಳಿಗೆ ಪೂರೈಕೆ ಆಗುತ್ತಿದೆ ಎಕ್ಸಾಪಯರ್ ಮೊಟ್ಟೆ; ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಶಾಸಕ ವೈ ಭರತ್ ಶೆಟ್ಟಿ ಆಗ್ರಹ

ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ ಎಂದು ಶಾಸಕ ಡಾ. ವೈ. ಭರತ್‌ ಶೆಟ್ಟಿ ಆರೋಪಿಸಿದ್ದಾರೆ.

ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿರವ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವ ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಗೆ ಹಾಕುತ್ತೇನೆಂದು ಗುಡುಗಿದ್ದರು. ಆದರೆ ಇನ್ನೂ ಈ ಸಮಸ್ಯೆ ಪರಿಹಾರವಾದಂತಿಲ್ಲ. ಇದೀಗ ಮತ್ತೆ ಮತ್ತೆ ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ. ಕಾಟಿಪಳ್ಳದ ಆಸುಪಾಸಿನಲ್ಲಿ ಗರ್ಭಿಣಿಯರಿಗೆ ವಿತರಿಸಲಾಗುವ ಮೊಟ್ಟೆಗಳು ಅಂಗನವಾಡಿಗಳಿಗೆ ಪೂರೈಕೆಯಾಗಿದ್ದು,ಹಾಳಾದ ಸ್ಥಿತಿಯಲ್ಲಿ ದೊರೆತಿದೆ.

ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗು ಮೊಟ್ಟೆ ತಿಂದು ಈ ಹಿಂದೆ ಅಸ್ವಸ್ಥರಾಗಿದ್ದರು. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಈ ಬಾರಿಯೂ ಕೆಲವು ಕಡೆಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಮಾಹಿತಿ ಲಭ್ಯವಾಗಿದೆ. ಮತ್ತೆ ಅಂಗನವಾಡಿಗಳಿಗೆ ಗುತ್ತಿಗೆದಾರರು ಕೊಳೆತ ಮೊಟ್ಟೆ ಪೂರೈಸಿರುವ ಬಗ್ಗೆ ಆಕ್ರೋಶ ಕೇಳಿ ಬರುತ್ತಿದೆ.

ಇದರ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿದ ಭರತ್‌ ಶೆಟ್ಟಿ ಅವರು ಗರ್ಭಿಣಿಯರಿಗೆ ವಿತರಿಸಲಾಗುವ ಮೊಟ್ಟೆಗಳು ಅಂಗನವಾಡಿಗಳಿಗೆ ಪೂರೈಕೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ದೊರೆತಿವೆ. ಕೆಲವು ದಿನಗಳ ಹಿಂದೆ ಓರ್ವ ಮಹಿಳೆ ಮತ್ತು ಮಗು ಮೊಟ್ಟೆ ತಿಂದು ಹಿಂದೆ ಅಸ್ವಸ್ಥರಾದ ಬಗ್ಗೆ ಗಮನಕ್ಕೆ ಬಂದಿದೆ. ಈ ಬಗ್ಗೆ ಸರಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಕೊಳೆತ ಮೊಟ್ಟೆ ಪೂರೈಕೆಯನ್ನು ಕೂಡಲೇ ತಡೆಯ ಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!