ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದ್ದಾರೆ.
ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು ಪೂರೈಕೆಯಾಗುತ್ತಿರವ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವ ಗುತ್ತಿಗೆದಾರನನ್ನು ಬ್ಲಾಕ್ ಲಿಸ್ಟ್ ಗೆ ಹಾಕುತ್ತೇನೆಂದು ಗುಡುಗಿದ್ದರು. ಆದರೆ ಇನ್ನೂ ಈ ಸಮಸ್ಯೆ ಪರಿಹಾರವಾದಂತಿಲ್ಲ. ಇದೀಗ ಮತ್ತೆ ಮತ್ತೆ ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ. ಕಾಟಿಪಳ್ಳದ ಆಸುಪಾಸಿನಲ್ಲಿ ಗರ್ಭಿಣಿಯರಿಗೆ ವಿತರಿಸಲಾಗುವ ಮೊಟ್ಟೆಗಳು ಅಂಗನವಾಡಿಗಳಿಗೆ ಪೂರೈಕೆಯಾಗಿದ್ದು,ಹಾಳಾದ ಸ್ಥಿತಿಯಲ್ಲಿ ದೊರೆತಿದೆ.
ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ, ಮಗು ಮೊಟ್ಟೆ ತಿಂದು ಈ ಹಿಂದೆ ಅಸ್ವಸ್ಥರಾಗಿದ್ದರು. ಕಳೆದ ತಿಂಗಳು ಮಂಗಳೂರಿನ ಹಲವೆಡೆ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದೆ. ಈ ಬಾರಿಯೂ ಕೆಲವು ಕಡೆಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗಿರುವ ಮಾಹಿತಿ ಲಭ್ಯವಾಗಿದೆ. ಮತ್ತೆ ಅಂಗನವಾಡಿಗಳಿಗೆ ಗುತ್ತಿಗೆದಾರರು ಕೊಳೆತ ಮೊಟ್ಟೆ ಪೂರೈಸಿರುವ ಬಗ್ಗೆ ಆಕ್ರೋಶ ಕೇಳಿ ಬರುತ್ತಿದೆ.
ಇದರ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿದ ಭರತ್ ಶೆಟ್ಟಿ ಅವರು ಗರ್ಭಿಣಿಯರಿಗೆ ವಿತರಿಸಲಾಗುವ ಮೊಟ್ಟೆಗಳು ಅಂಗನವಾಡಿಗಳಿಗೆ ಪೂರೈಕೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ದೊರೆತಿವೆ. ಕೆಲವು ದಿನಗಳ ಹಿಂದೆ ಓರ್ವ ಮಹಿಳೆ ಮತ್ತು ಮಗು ಮೊಟ್ಟೆ ತಿಂದು ಹಿಂದೆ ಅಸ್ವಸ್ಥರಾದ ಬಗ್ಗೆ ಗಮನಕ್ಕೆ ಬಂದಿದೆ. ಈ ಬಗ್ಗೆ ಸರಕಾರ ಕೂಡಲೇ ಕ್ರಮ ಕೈಗೊಳ್ಳ ಬೇಕು. ಕೊಳೆತ ಮೊಟ್ಟೆ ಪೂರೈಕೆಯನ್ನು ಕೂಡಲೇ ತಡೆಯ ಬೇಕು ಎಂದು ಒತ್ತಾಯಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…