ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ದಕ್ಷಿಣ ಕನ್ನಡದಲ್ಲಿ ‘ಗೃಹಜ್ಯೋತಿ’ ಯೋಜನೆಗೆ ಚಾಲನೆ ನೀಡಿದ ದಿನೇಶ್ ಗುಂಡೂರಾವ್

ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದು ಕೊಡುವಲ್ಲಿ “ಗ್ಯಾರಂಟಿ” ಯೋಜನೆಗಳು ಮಹತ್ತರ ಪಾತ್ರ ವಹಿಸಿದೆ ಎಂದು ಹೇಳಿದರೆ ತಪ್ಪಾಗಲಾರದು. 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಸೇವೆ ಅಭೂತಪೂರ್ವ ಸ್ವಾಗತ ಪಡೆಯಿತು. ಇನ್ನು ರಾಜ್ಯ ಕಾಂಗ್ರೆಸ್‌ ಸರಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಗೃಹಜ್ಯೋತಿ’ ಯೋಜನೆಗೆ ರಾಜ್ಯ ಮಟ್ಟದಲ್ಲಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಈ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.11ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಕಾಂಗ್ರೆಸ್‌ ಸರಕಾರವು ತನ್ನ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿದಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿದೆ. ಜನರ ಹಣವನ್ನು ಜನರಿಗೆ ನೀಡುವ ಮೂಲಕ ಜನರಿಗೆ ಶಕ್ತಿಯನ್ನು ನೀಡುವ ಕೆಲಸವನ್ನು ಸರಕಾರ ಮಾಡಿದೆ. ನೋಂದಣಿ ಮಾಡಿದ ಎಲ್ಲಾ ಅರ್ಹರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದರು.

5 ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯು ರಾಜೀವ್ ಗಾಂಧಿ ಅವರ ಹುಟ್ಟುಹಬ್ಬದ ದಿನದಂದು ಜಾರಿಗೆ ಬರಲಿದೆ ಎಂದು ತಿಳಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್‌ ಸಿಇಒ ಡಾ. ಆನಂದ್ ಕೆ. ಮತ್ತು ಮೆಸ್ಕಾಂ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!