ಕಾಟುಕುಕ್ಕೆ: ಹದಿಹರೆಯದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕೇರಳ ವನಿತಾ ಕಮಿಷನ್ ಸದಸ್ಯೆ ಕುಞಾಯಿಶ ಕರೆನೀಡಿದರು. ಪ್ರೀತಿ ಭಂಗದಂತಹ ಸಮಯದಲ್ಲಿ ವಿದ್ಯಾರ್ಥಿಗಳು ಆಕ್ರಮಣಕಾರಿಯಾಗಿ ವರ್ತಿಸುವ ನಡವಳಿಕೆಗೆದುರಾಗಿಯೂ ಅವರು ತಿಳಿಹೇಳಿದರು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ‘ಹದಿಹರೆಯದ ವಿದ್ಯಾರ್ಥಿಗಳನ್ನು ಶಕ್ತಿಪಡಿಸೋಣ’ ಎಂಬ ಕೇರಳ ರಾಜ್ಯದ ವನಿತಾ ಆಯೋಗ ನಡೆಸುವ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಣ್ಮಕಜೆ ಪಂಚಾಯತ್ ಅಧ್ಯಕ್ಷ ಸೋಮಶೇಖರ ಜೆ ಎಸ್,ಶಾಲಾ ಮೆನೇಜರ್ ಮಿತ್ತೂರ್ ಪುರುಷೋತ್ತಮ ಭಟ್,ವಾರ್ಡ್ ಸದಸ್ಯ ,ಬಿ.ಎಸ್ ಗಾಂಭೀರ್,ಶಾಲಾ ಹೆಡ್ ಮಾಸ್ಟರ್ ಹರಿಪ್ರಸಾದ್ ಶೆಟ್ಟಿ,ಪಿ ಟಿ ಎ ಅಧ್ಯಕ್ಷ ರಾಧಾಕೃಷ್ಣ ಆಚಾರ್ಯ,ಆಡಳಿತ ಮಂಡಳಿ ಸದಸ್ಯ ನಿವೃತ್ತ ಶಾಲಾ ಅಧ್ಯಾಪಕ ಲೋಕನಾಥಾ ಶೆಟ್ಟಿ ಮಾತನಾಡಿದರು. ಆಡಳಿತ ಮಂಡಳಿ ಅಧ್ಯಕ್ಷ ಸಂಜೀವ ರೈ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಮದಲ್ಲಿ ಪ್ರಿನ್ಸಿಪಾಲ್ ಪದ್ಮನಾಭ ಶೆಟ್ಟಿ ಸ್ವಾಗತಿಸಿ, ವಾಣಿ ಕೆ ವಂದಿಸಿದರು. ರಾಜೇಶ್ ಸಿ ಎಚ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಿರ್ಮಲ್ ಕುಮಾರ್ ಕಾರಡ್ಕ ಅವರ ತರಗತಿ ನಡೆಯಿತು. ಅಧ್ಯಾಪಕ ಸಂದೀಪ್ ಕುಮಾರ್ ನೇತೃತ್ವ ವಹಿಸಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…