ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಬಿಜೆಪಿ ದೃಡ ನಿರ್ಧಾರ – ನಳಿನ್ ಕುಮಾರ್ ಕಟೀಲ್

ಮಂಗಳೂರು: ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಬಿಜೆಪಿ ದೃಡವಾಗಿ ನಿಂತಿದೆ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಶನಿವಾರ ಆಗಸ್ಟ್ 12 ರಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, “ನಾವು ಪ್ರಕರಣದ ಮರು ತನಿಖೆಗೆ ಒತ್ತಾಯಿಸುತ್ತೇವೆ, ಇದರಿಂದಾಗಿ ನಿಜವಾದ ಅಪರಾಧಿಯನ್ನು ಬಂಧಿಸಿ ಆ ಮೂಲಕ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗುತ್ತದೆ.


ಸೌಜನ್ಯ ಅವರ ಕುಟುಂಬಕ್ಕೆ ನ್ಯಾಯ ಮತ್ತು ಪ್ರಕರಣದ ಮರು ತನಿಖೆಗಾಗಿ ಆಗಸ್ಟ್ 27 ರಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ. ಮರುದಿನ ಬಿಜೆಪಿ ತನ್ನ ನಿಯೋಗದೊಂದಿಗೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೇಡಿಕೆಗಳನ್ನು ಮುಂದಿಡಲಿದೆ ಎಂದು ನಳಿನ್ ಕಟೀಲ್ ಹೇಳಿದರು.
ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ವೈ ಶೆಟ್ಟಿ, ರಾಜೇಶ್ ನಾಯ್ಕ್, ಹರೀಶ್ ಪೂಂಜಾ, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!