ಕಾರ್ಕಳ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಷರೀಫ್ ರವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಲಭಿಸಿದೆ.ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ, ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಇವರಿಗೆ ಈ ಪ್ರಶಸ್ತಿ ಲಭಿಸಿದೆ.

ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ ಸೇವಾ ಸಂಘ (ರಿ) ಕರ್ನಾಟಕ ಇವರ ಸಹಯೋಗದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರವೀಂದ್ರ ಕಲಾ ಮಂಟಪದಲ್ಲಿ ನಡೆಯುವ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಮೊಹಮ್ಮದ್ ಶರೀಫ್ ಅವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.



