ಕಾರೊಂದು ಲಾರಿಗೆ ಡಿಕ್ಕಿ ಹೊಡೆದು ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಹಾಗು ಕಾರು ಚಾಲಕ ಸೇರಿ ಐದು ಜನ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಆ.13 ರಂದು ನಡೆದಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ಏಳು ಜನರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಶನಿವಾರ ರಾತ್ರಿ 11 ಗಂಟೆಗೆ ಮನೆಯಿಂದ ಕಾರಿನಲ್ಲಿ ತೆರಳಿದ್ದರು. ಇಂದು ಮುಂಜಾನೆ ವೇಳೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಲಾರಿವೊಂದಕ್ಕೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದರು.
ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು.
ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ತೀವ್ರ ಗಾಯಗಳಾಗಿತ್ತು. ಇವರನ್ನು ಚಿಕಿತ್ಸೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಧಾಖಲಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಮಧುಸೂದನ್ (25) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…