ನಟೋರಿಯಸ್ ಆರೋಪಿ, ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಎಂಬಾತ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ನೆತ್ತಿಲ ಪದವು ನಿವಾಸಿ ಮನ್ಸೂರ್(40) ಎಂಬಾತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಎಂಬಲ್ಲಿ ಆ.13ರಂದು ತಡರಾತ್ರಿ ನಡೆದಿದೆ.
ನಮೀರ್ ಹಂಝ ತನ್ನ ಸಹೋದರನಿಗೆ ಬಾಡಿಗೆ ಮನೆಗೆಂದು ನೆತ್ತಿಲಪದವು ಬಳಿಯಿರುವ ಮನ್ಸೂರ್ ಸಂಬಂಧಿಕರಿಗೆ ಸೇರಿದ ಮನೆಗೆ ಬಂದಿದ್ದರು. ಆದರೆ ಮನ್ಸೂರ್ ಇದನ್ನು ತಡೆದು, ರೌಡಿಗಳಿಗೆ ಬಾಡಿಗೆ ಮನೆ ನೀಡದಂತೆ ಮನೆಯವರಿಗೆ ತಿಳಿಸಿದ್ದರು. ಇದರಿಂದ ಮನ್ಸೂರ್ ಹಾಗೂ ನಮೀರ್ ಹಂಝ ತಂಡಗಳ ನಡುವೆ ಮಾತಿನಚಕಮಕಿ ನಡೆದು, ಪರಸ್ಪರ ಹೊಡೆದಾಟಕ್ಕೂ ಕಾರಣವಾಯಿತು. ಇದೇ ದ್ವೇಷದಲ್ಲಿ ನಮೀರ್ ಕತ್ತಿಯಿಂದ ಮನ್ಸೂರ್ ಕೈಗೆ ಕಡಿದು ಕೊಲೆಗೆ ಯತ್ನಿಸಿದ್ದಾನೆ. ಕೃತ್ಯ ಬಳಿಕ ಆರೋಪಿ ತಲೆಮರೆಸಿದ್ದಾನೆ.
ಉಳ್ಳಾಲದಲ್ಲಿ ಹನಿಟ್ರ್ಯಾಪ್, ಮುಕ್ಕಚ್ಚೇರಿ ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆ ಸಹಿತ ವಿವಿಧ ಕೊಲೆ ಯತ್ನ, ಹಲ್ಲೆ ಪ್ರಕರಣಗಳಲ್ಲಿ ಟಾರ್ಗೆಟ್ ತಂಡ ಸಕ್ರಿಯವಾಗಿತ್ತು. ಇಲ್ಯಾಸ್ ಕೊಲೆ ನಂತರ ತಂಡದ ಕೃತ್ಯಗಳು ಕಡಿಮೆಯಾಗಿತ್ತು. ಇದೇ ತಂಡದಲ್ಲಿದ್ದುಕೊಂಡ ಹಂಝ ಕೂಡಾ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದನು ಎನ್ನಲಾಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…