ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.
ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.
ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.
ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್‌ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…