ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ರಾಘವೇಂದ್ರ ಅಮೀನ್ ಎಂದು ಗುರುತಿಸಲಾಗಿದ್ದು,ಆರೋಪಿ ರಾಘವೇಂದ್ರ ಅಮೀನ್ ಮಾದಕವಸ್ತು ಗಾಂಜಾವನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಮೈಸೂರಿನ ಆಲಿ ಮೊಹಮ್ಮದ್ ಅಲಿಯಾಸ್ ಸಲೀಂ ಮೈಸೂರು ಎಂಬಾತನಿ0ದ ತೆಗೆದುಕೊಂಡು, ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗೆ ಒಳಪಡಿಸಿ ಪತ್ತೆ ಹಚ್ಚಿದ್ದರು.
ಆರೋಪಿಯಿಂದ 40,000 ರೂ. ಮೌಲ್ಯದ 2 ಕೆ.ಜಿ. 100 ಗ್ರಾಮ್ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…