ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರ ಅಹೋರಾತ್ರಿ ಧರಣಿ ವಿಚಾರ, ಡಿಸಿ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಧರಣಿಯನ್ನು ಕೈ ಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ

ಇವರು ಮಂಗಳೂರಿನಲ್ಲಿ ಮಾತಾನಾಡಿ, ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡ್ತಾ ಇದೆ. ಶಾಸಕರ ಹಕ್ಕುಗಳ ಚ್ಯುತಿ ಮಾಡುವ ಕೆಲಸ ಆಗ್ತಾ ಇದ್ದು, ಒಂದು ಪಕ್ಷದ ಕೆಲ ನಾಯಕರ ಮಾತು ಕೇಳಿ ಚ್ಯುತಿ ಮಾಡಲಾಗ್ತಿದೆ. ಮೂಡಬಿದ್ರೆಯ ಇರುವೈಲ್ ಹಾಗೂ ಬಂಟ್ವಾಳದಲ್ಲಿ ಘಟನೆ ನಡೆದಿದೆ.

ಅಧಿಕಾರಿಗಳು ಶಿಷ್ಟಾಚಾರ ಪ್ರಕಾರ ಆಮಂತ್ರಣ ಕೊಟ್ಟಿದ್ದಾರೆ. ಆದರೆ ಡಿಸಿ ಕಚೇರಿಯಿಂದ ಏಕಾಏಕಿ ಕಾರ್ಯಕ್ರಮ ರದ್ದು ಮಾಡಲಾಗಿದೆರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವರ ಹೆಸರಿಲ್ಲ ಅಂತ ರದ್ದು ಮಾಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಹಾಕಲಾಗಿದೆ, ಸ್ಪೀಕರ್, ಪರಿಷತ್ ಸದಸ್ಯರ ಹೆಸರೂ ಇತ್ತು. ಬಿಜೆಪಿಯ ಆರೂ ಶಾಸಕರ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡಲಾಗ್ತಿದೆ ಜಿಲ್ಲಾಧಿಕಾರಿಗಳು ಇವತ್ತು ಬಂದು ಭರವಸೆ ಕೊಟ್ಟು ವಿನಂತಿ ಮಾಡಿದ್ದಾರೆ. ಎಂದರು.



