ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಸ್ಥಾನದ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು. ನಿವೃತ್ತ ಸೈನಿಕರಾದ ನವಾನಂದ ಎಕ್ಕಾರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರು, ಅರ್ಚಕರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಕೇಸರಿ ಬಿಳಿ ಹಸಿರು ಬಣ್ಣದ ಹೂವುಗಳಿಂದ ದೇವರ ವಿಶೇಷ ಅಲಂಕಾರ ಸ್ಥಳಕ್ಕೆ ಆಗಮಿಸಿದ ಭಕ್ತರ ಗಮನ ಸೆಳೆಯಿತು. ಇನ್ನೂ ದೇವಾಲಯದ ಆನೆ ಮಹಾಲಕ್ಷ್ಮಿಯು ರಾಷ್ಟ್ರ ಧ್ವಜವನ್ನು ಹಿಡಿದು ಭಾಗವಹಿಸಿದ್ದು ಮಾತ್ರವಲ್ಲದೆ, ಧ್ವಜ ವಂದನೆ ಗೈದಿರುದು ವಿಶೇಷವಾಗಿತ್ತು. ಈ ಹಿಂದೆ ಪುಟ್ ಬಾಲ್ ಆಡಿ, ಕ್ರಿಕೇಟ್ ಆಡಿ, ತಾನೇ ನೀರಿನ ಪೈಪ್ ಹಿಡಿದು ಸ್ಥಾನ ಮಾಡಿದ್ದ ಮಹಾಲಕ್ಷ್ಮಿ ಆನೆ ಇಂದು ದ್ವಜ ಹಿಡಿದು ಗಮನ ಸೆಳೆಯಿತು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…