ಧಾರಕಾರ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55 ಜನರು ಸಾವನ್ನಪ್ಪಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪರಿಣಾಮ ಎಲ್ಲೆಂದರಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ 55 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯಂದು ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಶಿಮ್ಲಾ, ಹಿಮಾಚಲ ಪ್ರದೇಶ: ಆಗಸ್ಟ್ 14 ರ ದಿನ ಹಿಮಾಚಲ ಪ್ರದೇಶಕ್ಕೆ ಕರಾಳ ದಿನವೆಂದೇ ಹೇಳಬಹುದು. ಧಾರಾಕಾರ ಮಳೆಯಿಂದ ಸಂಭವಿಸಿದ್ದ ವಿವಿಧ ದುರಂತಗಳಲ್ಲಿ ಸುಮಾರು 55 ಜನರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲ ನೂರಾರು ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ರೈತರ ಬೆಳೆಯೂ ಹಾಳಾಗಿದ್ದು, ವಿವಿಧೆಡೆ ಭೂಕುಸಿತದಿಂದಾಗಿ ಹಲವು ರಸ್ತೆಗಳು ಬಂದ್ ಆಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
24 ಗಂಟೆಗಳಲ್ಲಿ 50 ಕ್ಕೂ ಹೆಚ್ಚು ಸಾವಾಗಿದ್ದು, ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸೋಮವಾರ ಸಂಜೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸುರಿದ ಭಾರಿ ಮಳೆಗೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಶಿವದೇವಾಲಯದ ಅವಶೇಷಗಳಡಿಯಿಂದ 10 ಮೃತದೇಹಗಳು ಪತ್ತೆ: ಹಿಮಾಚಲದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಂತಹ ಮಳೆ ಸುರಿದಿರಲಿಲ್ಲ.. ಇದರಲ್ಲಿ 50 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಶಿಮ್ಲಾದ ಶಿವ ದೇವಾಲಯದಲ್ಲಿ ಭೂಕುಸಿತದಲ್ಲಿ ಇನ್ನೂ 20 ಮಂದಿ ಸಾವನ್ನಪ್ಪಿರುವ ಶಂಕೆ ಇದ್ದು, ನಿನ್ನ 8 ಜನರ ಮೃತದೇಹಗಳನ್ನು ನಿನ್ನೆ ಹೊರತೆಗೆಯಲಾಗಿತ್ತು. ಇಂದು ಸಹ ಎರಡು ಮೃತ ದೇಹಗಳನ್ನ ಹೊರ ತೆಗೆಯಲಾಗಿದೆ. ಒಟ್ಟು 10 ಮೃತದೇಹಗಳು ಇಲ್ಲಿ ದೊರೆತಿವೆ. ಮುಂದಿನ ದಿನಗಳಲ್ಲಿ ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಇಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿಲ್ಲ: ಮಳೆಯಿಂದಾದ ದುರಂತಗಳ ಹಿನ್ನೆಲೆ ಸ್ವಾತಂತ್ರ‍್ಯ ದಿನಾಚರಣೆಯಂದು ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸುಖು ಮಾತನಾಡಿ, ಸಚಿವರು ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮದಲ್ಲಿ ಮಾತ್ರ ಧ್ವಜಾರೋಹಣ ಮಾಡುತ್ತಾರೆ. ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ಅಥವಾ ಪರೇಡ್‌ನಲ್ಲಿ ಭಾಗವಹಿಸುವ ಇತರ ತುಕಡಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿರುತ್ತವೆ. ಈ ಬಾರಿ ಹಿಮಾಚಲದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯಿಂದ ಚೇತರಿಸಿಕೊಳ್ಳಲು ಸಮಯ ಹಿಡಿಯಲಿದೆ ಎಂದು ಸಿಎಂ ತಿಳಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ: ಹಿಮಾಚಲದಲ್ಲಿ ಸಂಭವಿಸಿದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಅಧ್ಯಕ್ಷೆ ದ್ರೌಪದಿ ಮುರ್ಮು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ತಮ್ಮ ಟ್ವೀಟ್‌ನಲ್ಲಿ ಹಿಮಾಚಲದಲ್ಲಿ ಭಾರಿ ನಷ್ಟದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಸಿಎಂ ಜೊತೆ ಮಾತನಾಡಿದ ಜೆಪಿ ನಡ್ಡಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯದ ಸಿಎಂ ಸುಖವಿಂದರ್ ಸಿಂಗ್ ಸುಖು ಅವರೊಂದಿಗೆ ಫೋನ್ ಮೂಲಕ ಮಾತನಾಡಿದರು. ನಡ್ಡಾ ಅವರು ಕೇಂದ್ರ ಸರ್ಕಾರದಿಂದ ನೆರವು ನೀಡುವ ಭರವಸೆ ನೀಡಿದ್ದಾರೆ. ಮತ್ತೊಂದೆಡೆ, ಹಿಮಾಚಲ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಕೂಡ ಈ ಮಳೆಯ ಅವಾಂತರ ಕಂಡು ಬೆಚ್ಚಿಬಿದ್ದಿದ್ದಾರೆ. ಆಗಸ್ಟ್ 15 ರಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಅಟ್ ಹೋಮ್ ಕಾರ್ಯಕ್ರಮವನ್ನು ರಾಜ್ಯಪಾಲರು ರದ್ದುಗೊಳಿಸಿದ್ದಾರೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ಅವರ ಸಂಪುಟ ಸದಸ್ಯರು ಶಿಮ್ಲಾ, ಸೋಲನ್ ಇತ್ಯಾದಿಗಳಲ್ಲಿ ಸಂಭವಿಸಿದ ದುರಂತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲ ಸಂತ್ರಸ್ತ ಜನರಿಗೆ ಸಾಂತ್ವನ ಮತ್ತು ಸಾಧ್ಯ ಇರುವ ಎಲ್ಲ ಸಹಾಯದ ಭರವಸೆ ನೀಡಿದರು. ಹಿಮಾಚಲದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.
ಹಿಮಾಚಲ ಮಳೆಗೆ 55 ಜನ ಬಲಿ: ಸಂಜೆಯವರೆಗೂ ವಿವಿಧ ಜಿಲ್ಲೆಗಳಿಂದ ಬಂದ ಮಾಹಿತಿ ಪ್ರಕಾರ ಇದುವರೆಗೆ 55 ಸಾವುಗಳು ಸಂಭವಿಸಿವೆ. ಶಿಮ್ಲಾ ಜಿಲ್ಲೆಯಲ್ಲಿ 14, ಮಂಡಿ ಜಿಲ್ಲೆಯಲ್ಲಿ 19, ಸಿರ್ಮೌರ್ ಜಿಲ್ಲೆಯಲ್ಲಿ 7, ಹಮೀರ್‌ಪುರ, ಕಾಂಗ್ರಾ, ಬಿಲಾಸ್‌ಪುರ ಸೇರಿದಂತೆ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ವಿವಿಧ ದುರಂತಗಳಲ್ಲಿ 13 ಸಾವುಗಳು ಸೇರಿದಂತೆ ಒಟ್ಟು ಸಂಖ್ಯೆ 55 ಜನರು ಮೃತಪಟ್ಟಿದ್ದಾರೆ. 24 ಗಂಟೆಯೊಳಗೆ ರಾಜ್ಯದಲ್ಲಿ ಸಂಭವಿಸಿದ ಈ ಅವಘಡಗಳಿಂದ ರಾಜ್ಯದ ಜನರು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ ಐಜಿಎಂಸಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಎಂ
ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…