ರಾಷ್ಟ್ರ

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55 ಮಂದಿ ಸಾವು ..!

ಧಾರಕಾರ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55 ಜನರು ಸಾವನ್ನಪ್ಪಿದ್ದಾರೆ.


ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪರಿಣಾಮ ಎಲ್ಲೆಂದರಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಹಿಮಾಚಲ ಪ್ರದೇಶದಲ್ಲಿ 55 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯಂದು ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಶಿಮ್ಲಾ, ಹಿಮಾಚಲ ಪ್ರದೇಶ: ಆಗಸ್ಟ್ 14 ರ ದಿನ ಹಿಮಾಚಲ ಪ್ರದೇಶಕ್ಕೆ ಕರಾಳ ದಿನವೆಂದೇ ಹೇಳಬಹುದು. ಧಾರಾಕಾರ ಮಳೆಯಿಂದ ಸಂಭವಿಸಿದ್ದ ವಿವಿಧ ದುರಂತಗಳಲ್ಲಿ ಸುಮಾರು 55 ಜನರು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲ ನೂರಾರು ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ರೈತರ ಬೆಳೆಯೂ ಹಾಳಾಗಿದ್ದು, ವಿವಿಧೆಡೆ ಭೂಕುಸಿತದಿಂದಾಗಿ ಹಲವು ರಸ್ತೆಗಳು ಬಂದ್ ಆಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

24 ಗಂಟೆಗಳಲ್ಲಿ 50 ಕ್ಕೂ ಹೆಚ್ಚು ಸಾವಾಗಿದ್ದು, ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸೋಮವಾರ ಸಂಜೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸುರಿದ ಭಾರಿ ಮಳೆಗೆ ರಾಜ್ಯಾದ್ಯಂತ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಶಿವದೇವಾಲಯದ ಅವಶೇಷಗಳಡಿಯಿಂದ 10 ಮೃತದೇಹಗಳು ಪತ್ತೆ: ಹಿಮಾಚಲದ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಂತಹ ಮಳೆ ಸುರಿದಿರಲಿಲ್ಲ.. ಇದರಲ್ಲಿ 50 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಶಿಮ್ಲಾದ ಶಿವ ದೇವಾಲಯದಲ್ಲಿ ಭೂಕುಸಿತದಲ್ಲಿ ಇನ್ನೂ 20 ಮಂದಿ ಸಾವನ್ನಪ್ಪಿರುವ ಶಂಕೆ ಇದ್ದು, ನಿನ್ನ 8 ಜನರ ಮೃತದೇಹಗಳನ್ನು ನಿನ್ನೆ ಹೊರತೆಗೆಯಲಾಗಿತ್ತು. ಇಂದು ಸಹ ಎರಡು ಮೃತ ದೇಹಗಳನ್ನ ಹೊರ ತೆಗೆಯಲಾಗಿದೆ. ಒಟ್ಟು 10 ಮೃತದೇಹಗಳು ಇಲ್ಲಿ ದೊರೆತಿವೆ. ಮುಂದಿನ ದಿನಗಳಲ್ಲಿ ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿಲ್ಲ: ಮಳೆಯಿಂದಾದ ದುರಂತಗಳ ಹಿನ್ನೆಲೆ ಸ್ವಾತಂತ್ರ‍್ಯ ದಿನಾಚರಣೆಯಂದು ನಡೆಯಬೇಕಿದ್ದ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸುಖು ಮಾತನಾಡಿ, ಸಚಿವರು ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮದಲ್ಲಿ ಮಾತ್ರ ಧ್ವಜಾರೋಹಣ ಮಾಡುತ್ತಾರೆ. ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ಅಥವಾ ಪರೇಡ್‌ನಲ್ಲಿ ಭಾಗವಹಿಸುವ ಇತರ ತುಕಡಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿರುತ್ತವೆ. ಈ ಬಾರಿ ಹಿಮಾಚಲದಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯಿಂದ ಚೇತರಿಸಿಕೊಳ್ಳಲು ಸಮಯ ಹಿಡಿಯಲಿದೆ ಎಂದು ಸಿಎಂ ತಿಳಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ: ಹಿಮಾಚಲದಲ್ಲಿ ಸಂಭವಿಸಿದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಅಧ್ಯಕ್ಷೆ ದ್ರೌಪದಿ ಮುರ್ಮು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ತಮ್ಮ ಟ್ವೀಟ್‌ನಲ್ಲಿ ಹಿಮಾಚಲದಲ್ಲಿ ಭಾರಿ ನಷ್ಟದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಸಿಎಂ ಜೊತೆ ಮಾತನಾಡಿದ ಜೆಪಿ ನಡ್ಡಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯದ ಸಿಎಂ ಸುಖವಿಂದರ್ ಸಿಂಗ್ ಸುಖು ಅವರೊಂದಿಗೆ ಫೋನ್ ಮೂಲಕ ಮಾತನಾಡಿದರು. ನಡ್ಡಾ ಅವರು ಕೇಂದ್ರ ಸರ್ಕಾರದಿಂದ ನೆರವು ನೀಡುವ ಭರವಸೆ ನೀಡಿದ್ದಾರೆ. ಮತ್ತೊಂದೆಡೆ, ಹಿಮಾಚಲ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಕೂಡ ಈ ಮಳೆಯ ಅವಾಂತರ ಕಂಡು ಬೆಚ್ಚಿಬಿದ್ದಿದ್ದಾರೆ. ಆಗಸ್ಟ್ 15 ರಂದು ಸಂಜೆ ರಾಜಭವನದಲ್ಲಿ ನಡೆಯಲಿರುವ ಅಟ್ ಹೋಮ್ ಕಾರ್ಯಕ್ರಮವನ್ನು ರಾಜ್ಯಪಾಲರು ರದ್ದುಗೊಳಿಸಿದ್ದಾರೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ಅವರ ಸಂಪುಟ ಸದಸ್ಯರು ಶಿಮ್ಲಾ, ಸೋಲನ್ ಇತ್ಯಾದಿಗಳಲ್ಲಿ ಸಂಭವಿಸಿದ ದುರಂತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲ ಸಂತ್ರಸ್ತ ಜನರಿಗೆ ಸಾಂತ್ವನ ಮತ್ತು ಸಾಧ್ಯ ಇರುವ ಎಲ್ಲ ಸಹಾಯದ ಭರವಸೆ ನೀಡಿದರು. ಹಿಮಾಚಲದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ಹಿಮಾಚಲ ಮಳೆಗೆ 55 ಜನ ಬಲಿ: ಸಂಜೆಯವರೆಗೂ ವಿವಿಧ ಜಿಲ್ಲೆಗಳಿಂದ ಬಂದ ಮಾಹಿತಿ ಪ್ರಕಾರ ಇದುವರೆಗೆ 55 ಸಾವುಗಳು ಸಂಭವಿಸಿವೆ. ಶಿಮ್ಲಾ ಜಿಲ್ಲೆಯಲ್ಲಿ 14, ಮಂಡಿ ಜಿಲ್ಲೆಯಲ್ಲಿ 19, ಸಿರ್ಮೌರ್ ಜಿಲ್ಲೆಯಲ್ಲಿ 7, ಹಮೀರ್‌ಪುರ, ಕಾಂಗ್ರಾ, ಬಿಲಾಸ್‌ಪುರ ಸೇರಿದಂತೆ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ವಿವಿಧ ದುರಂತಗಳಲ್ಲಿ 13 ಸಾವುಗಳು ಸೇರಿದಂತೆ ಒಟ್ಟು ಸಂಖ್ಯೆ 55 ಜನರು ಮೃತಪಟ್ಟಿದ್ದಾರೆ. 24 ಗಂಟೆಯೊಳಗೆ ರಾಜ್ಯದಲ್ಲಿ ಸಂಭವಿಸಿದ ಈ ಅವಘಡಗಳಿಂದ ರಾಜ್ಯದ ಜನರು ಬೆಚ್ಚಿಬಿದ್ದಿದ್ದಾರೆ. ಅಷ್ಟೇ ಅಲ್ಲ ಐಜಿಎಂಸಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಎಂ
ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…

2 hours ago

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…

2 hours ago

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…

2 hours ago

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…

2 hours ago

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…

2 hours ago

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…

2 hours ago