ತಿರುಪತಿಗೆ ಜೀವನದಲ್ಲಿ ಒಮ್ಮೆಯಾದರೂ ಹೋಗಬೇಕು ಎನ್ನುವ ಬಯಕೆ ಹಿಂದೂ ಸನಾತನ ಧರ್ಮದ ಜನರಲ್ಲಿ ಇರುವುದು ಸಹಜ.
ಆದರೆ ಪ್ರಸ್ತುತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಹೋಗುವವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗಬೇಕೆಂದು, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಆದೇಶ ಜಾರಿ ಮಾಡಿದೆ.
ಇತ್ತೀಚೆಗೆ ತಿಮ್ಮಪ್ಪನ ದರ್ಶನ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿತ್ತು. ಈ ಹಿನ್ನೆಲೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ವಹಿಸುತ್ತಿದ್ದು, ಭಕ್ತರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಹೋಗುವಂತೆ ತಿಳಿಸಿದೆ. ಅಲ್ಲದೇ ಪಾದಚಾರಿ ಮಾರ್ಗದಲ್ಲಿ ಹೋಗುವವರರು ಗುಂಪಿನಲ್ಲಿ ಹೋಗಬೇಕು. ಒಂದೊಂದು ಗುಂಪಿಗೂ ಒಬ್ಬ ಸೆಕ್ಯೂರಿಟಿ ಗಾರ್ಡ್‍ನ್ನು ಇರಿಸಲಾಗುತ್ತದೆ ಅಂತ ತಿಳಿಸಿದೆ.
ಅಲಿಪಿರಿ ಮತ್ತು ಶ್ರೀವಾರಿ ಮೆಟ್ಟು ಪಾದಚಾರಿ ಮಾರ್ಗದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಶವಿಲ್ಲ ಎಂದು ಟಿಟಿಡಿ ಹೇಳಿದೆ. 15 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಲಿಪಿರಿ ಮಾರ್ಗದಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರವರೆಗೆ ಹಾಗೂ ಶ್ರೀವಾರಿ ಮೆಟ್ಟು ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6ರವೆರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಟಿಟಿಡಿ ತಿಳಿಸಿದೆ.
ತಿರುಮಲ ಬೆಟ್ಟವನ್ನು ನಡಿಗೆಯ ಮೂಲಕ ತೆರಳುವ ಭಕ್ತರ ಮತ್ತು ಮಕ್ಕಳ ಕೈಗೆ ಅಲ್ಲಿನ ಪೋಲೀಸ್ ಸಿಬ್ಬಂದಿ ಬ್ಯಾಂಡ್ ಕಟ್ಟುತ್ತಾರೆ. ಮಕ್ಕಳು ಹೆತ್ತವರಿಂದ ನಾಪತ್ತೆಯಾದರೆ ಅವರನ್ನು ಸುಲಭವಾಗಿ ಹುಡುಕಲು ಇದು ಉಪಯುಕ್ತವಾಗಿದೆ. ಇದರೊಂದಿಗೆ ಮಕ್ಕಳ ಕೈಯಲ್ಲಿರುವ ಬ್ಯಾಂಡ್‍ನಲ್ಲಿ ಪೋಷಕರ ವಿವರಗಳನ್ನು ನಮೂದಿಸಲಾಗುತ್ತದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…