ಚಂದ್ರನ ಅಂಗಳದಲ್ಲಿ ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-3 ಲ್ಯಾಂಡ್ ಆಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ.
ಇಸ್ರೋ ತನ್ನ ಚಂದ್ರಯಾನ-3 ಸ್ಯಾಟಲೈಟ್ ಅನ್ನು ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಮಾಡಲು ಮುಂದಾಗಿದೆ. ಪ್ರತಿಯೊಂದು ಹಂತದಲ್ಲೂ ಯಶಸ್ವಿಯಾಗಿರುವ ಇಸ್ರೋ ಇವತ್ತು ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
ಚಂದ್ರಯಾನ-3 ಇವತ್ತು ಯಶಸ್ವಿಯಾಗಿ ಚಂದ್ರನ ಅಂತಿಮ ಕಕ್ಷೆಯನ್ನು ತಲುಪಿದ್ದು, ಇಸ್ರೋ ಲೇಟೆಸ್ಟ್ ಮಾಹಿತಿಯನ್ನು ಇಸ್ರೋದ ಮಾಹಿತಿ ಪ್ರಕಾರ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರಯಾನ-3 ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಅಂದ್ರೆ ಇಸ್ರೋದ ಚಂದ್ರಯಾನ-3 ಚಂದ್ರನಿಗೆ ಇನ್ನು ಕೇವಲ 153 km x 163 km ಅಂತರದಲ್ಲಿದೆ. ನಾಳೆ ಅಂದ್ರೆ ಆಗಸ್ಟ್ 17ರಂದು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಯಲಿದೆ. ಲ್ಯಾಂಡರ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸುವ ಮುಹೂರ್ತವೂ ನಿಗದಿಯಾಗಿದೆ.
ಕಳೆದ ಜುಲೈ 14ರಂದು ಉಡಾವಣೆಯಾಗಿದ್ದ ಚಂದ್ರಯಾನ-3 ತನ್ನ ಯಶಸ್ವಿ ಪ್ರಯಾಣವನ್ನು ಮುಂದುವರಿಸಿದೆ. ಆಗಸ್ಟ್ 5ರಂದು ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ ಚಂದ್ರಯಾನ 3 ಇಂದು ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಪ್ರವೇಶಿಸಿದೆ. ನಾಳೆ ಲ್ಯಾಂಡಲ್ ಮಾಡ್ಯೂಲ್‌ನಿಂದ ಪ್ರೊಪಲ್ಟನ್ ಮಾಡ್ಯೂಲ್ ಅನ್ನು ಪ್ರತ್ಯೇಕಿಸಲಾಗುತ್ತಿದೆ. ಎಲ್ಲಾ ಅಂದುಕೊAಡತೆ ಆದರೆ ಇದೇ ಆಗಸ್ಟ್ 23ರಂದು ಚಂದ್ರಯಾನ-3 ಸಾಫ್ಟ್ ಲ್ಯಾಂಡಿAಗ್ ಆಗಲಿದೆ. ಅಂದು ಚಂದ್ರನ ಮೇಲ್ಮಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜನೆ ತಯಾರಾಗಿದೆ.
ಆಗಸ್ಟ್ 23ರಂದು ಚಂದ್ರಯಾನ-3ನಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಿದ್ರೆ ಇಸ್ರೋ ಹೊಸದೊಂದು ಇತಿಹಾಸ ಬರೆಯಲಿದೆ. ಅಮೆರಿಕಾ, ರಷ್ಯಾ, ಚೀನಾದ ಈ ಸಾಧನೆ ಮಾಡಿದ 4ನೇ ದೇಶ ಭಾರತ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…