ಪೆರ್ಲ: ಎಣ್ಮಕಜೆ ಗ್ರಾ.ಪಂ.ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಧಕರಿಗೆ ಸನ್ಮಾನ, ಎಪ್ಲಸ್ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ದೇಶ ಭಕ್ತಿ ಗೀತೆಗಳ ಸಂಗೀತ ಸೌರಭ ಕಾರ್ಯಕ್ರಮದೊಂದಿಗೆ ವೈವಿಧ್ಯಮಯವಾಗಿ ಆಚರಿಸಲಾಯಿತು. ಬಜಕೂಡ್ಲು ಸಮೀಪದ ಕಾನ ಎಂಬಲ್ಲಿರುವ ಸಾಂತ್ವನ ವಿಶೇಷ ಬಡ್ಸ್ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ್,ಬ್ಲೋಕ್ ಪಂ.ಸದಸ್ಯ ಕೆ.ಪಿ.ಅನಿಲ್ ಕುಮಾರ್, ಎಣ್ಮಕಜೆ ಗ್ರಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಎಸ್.ಗಾಂಭೀರ್, ಸೌದಾಭಿ ಹನೀಫ್, ಜಯಶ್ರೀ ಕುಲಾಲ್, ಹಾಗೂ ಪಂಚಾಯತು ಸದಸ್ಯರಾದ ಮಹೇಶ್ ಭಟ್, ಶಶಿಧರ, ನರಸಿಂಹ ಪೂಜಾರಿ,ರಾಮಚಂದ್ರ, ಕುಸುಮಾವತಿ, ಉಷಾ, ಝರಿನಾ ಮುಸ್ತಾಫ,ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಹಾಗೂ ಪಂ.ಉದ್ಯೋಗಿಗಳು,ಪಂ.ಯೋಜನಾ ಸಮಿತಿಯ ಉಪಾಧ್ಯಕ್ಷೆ ಆಯಿಷಾ ಎ.ಎ, ವಿವಿಧ ಇಲಾಖಾ ಅಧಿಕಾರಿಗಳು ಪಾಲ್ಗೊಂಡರು. ಈ ಸಂದರ್ಭದಲ್ಲಿ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಪ್ಪಯ್ಯ ಮಣಿಯಾಣಿ ಕಾಟುಕುಕ್ಕೆ, ಸದಾಶಿವ ನಾಯ್ಕ್ ಖಂಡಿಗೆ, ಈಶ್ವರ ನಾಯ್ಕ ವಾಣಿನಗರ, ನಿವೃತ್ತ ಪ್ರಾಂಶುಪಾಲ ಬಾಪೂಂಞಿ ಮಾಸ್ತರ್, ಸಾಹಿತಿ ಹರೀಶ್ ಪೆರ್ಲ, ಕಾಷ್ಠ ಶಿಲ್ಪಿ, ನ್ಯಾಯವಾದಿ ಜಿ.ಕೆ.ಭಟ್ ಪೂವಾಳೆ, ಆಯುರ್ವೇದಿಕ್ ಶಿಕ್ಷಣದಲ್ಲಿ ಪ್ರಥಮ ರಾಂಕ್ ಚಿನ್ನದ ಪದಕ ವಿಜೇತೆ ಡಾ.ರಮ್ಯ ದರ್ಬೆ, ಕೃಷಿ ಯಂತ್ರೋಪಕರಣ ಅವಿಷ್ಕಾರಿಸಿದ ಗೋಪಾಲಕೃಷ್ಣ ಶರ್ಮ ಕಾಚಿಕ್ಕಾಡು, ಯುವ ಕವಯಿತ್ರಿ ಸುಜಯ ಸಜಂಗದ್ದೆ, ಕ್ರೀಡಾ ಪಟು ರಾಕೇಶ್ ಕುಮಾರ್ ನಲ್ಕ, ಹಾಗೂ ಎಸ್ಸಸ್ಸೆಲ್ಸಿ, ಪ್ಲಸ್ ಟು ಪರೀಕ್ಷೆಯಲ್ಲಿ ಎ ಪ್ಲಸ್ ಗಳಿಸಿದ ಪಂಚಾಯತು ಮಟ್ಟದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ಎಸ್ಸಸ್ಸೆಲ್ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ತೇರ್ಗಡೆ ದಾಖಲಿಸಿದ ಪೆರ್ಲ ಸತ್ಯನಾರಾಯಣ ಶಾಲೆ, ಪಡ್ರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆ, ಕಾಟುಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆ, ಶೇಣಿ ಶ್ರೀಶಾರದಾಂಬ ಹೈಯರ್ ಸೆಕೆಂಡರಿ ಶಾಲೆಗೆ ವಿಶೇಷ ಪುರಸ್ಕಾರ ವಿತರಿಸಲಾಯಿತು. ಪ್ರೇಮ್ ಚಂದ್ ಪಿ ಎಸ್ ಸ್ವಾಗತಿಸಿ .ಬಡ್ಸ್ ಶಾಲೆ ಪ್ರಿನ್ಸಿಪಾಲ್ ಮರಿಯಾಂಬಿ ವಂದಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…