ಮುಲ್ಕಿ: ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ, ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು 2021 ನೇ ಸಾಲಿನ ದ. ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ), ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಿವೃತ್ತ ವೀರ ಯೋಧರಾದ ಹವಾಲ್ದಾರ್ ಚಂದ್ರಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು.
ದ್ವಜಾರೋಹಣಗೈಯುವ ಸಮಯದಲ್ಲಿ ಸದಸ್ಯರು ಹಾಗೂ ಸದಸ್ಯೆಯರು ವಂದೇ ಮಾತರಂ ಹಾಗೂ ರಾಷ್ಟ್ರಗೀತೆ ಹಾಡಿ ಸಂಭ್ರಮಾಚರಣೆ ವ್ಯಕ್ತಪಡಿಸಿದರು.
ಸಂಸ್ಥೆಯ ಸದಸ್ಯರು ಹಾಗೂ ಸದಸ್ಯೆಯರು ಬಹಳ ಸಂಭ್ರಮದಿಂದ ವೇದಿಕೆ ಹಾಗೂ ಸಭಾಂಗಣವನ್ನು ಸಜ್ಜುಗೊಳಿಸಿದ್ದರು. ಸದಸ್ಯೆಯರ ಸಹಕಾರದಿಂದ ರಂಗೋಲಿ ಚಿತ್ತಾರವು ಬಹಳ ಸುಂದರವಾಗಿ ಮೂಡಿಬಂದಿತ್ತು.
ವಿಶೇಷವಾಗಿ ಸರಕಾರಿ ಹಿರಿಯ ಪ್ರಾಥಮಿಕ ಹಿಂದುಸ್ಥಾನಿ ಶಾಲೆ ತೋಕೂರು, ಹಾಗೂ ಅಂಗನವಾಡಿ ಶಾಲೆ ತೋಕೂರು ಇಲ್ಲಿನ ಪುಟಾಣಿ ಮಕ್ಕಳು ಹಾಗೂ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತುಳು ರಂಗ ಭೂಮಿಯ ನಿರ್ದೇಶಕರು ಶ್ರೀ ನರೇಂದ್ರ ಕಿರೋಡಿಯನ್, ಸೂರ್ಯ ಕಾಂತಿ ಚಾರಿಟೇಬಲ್ ಫೌಂಡೇಶನ್ ಇದರ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್, ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಮೋಹನ್ ದಾಸ್, ಶ್ರೀ ಸಂತೋಷ್ ಕುಮಾರ್,ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿನ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀ ಯೋಗೀಶ್ ಕೋಟ್ಯಾನ್, ಸ್ಪೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಬೇಕಲ್,ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ ಪ್ರಧಾನ ಕಾರ್ಯದರ್ಶಿ ಶ್ರೀ ದೀಪಕ್ ಸುವರ್ಣ, ನಿಕಟ ಪೂರ್ವ ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ,ಪರಿಸರ ಸಂರಕ್ಷಣಾ ಕಾರ್ಯದರ್ಶಿ ಶ್ರೀ ಜಗದೀಶ್ ಕೋಟ್ಯಾನ್, ಮಹಿಳಾ ಕಾರ್ಯಧ್ಯಕ್ಷೆ ಶ್ರೀಮತಿ ಯಶೋಧ ದೇವಾಡಿಗ, ನಿಕಟ ಪೂರ್ವ ಕಾರ್ಯಾಧ್ಯಕ್ಷೆ ಶ್ರೀಮತಿ ಶೋಭಾ.ವಿ. ಅಂಚನ್ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ಗ್ರಾಮಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್ ಅತಿಥಿಗಳನ್ನು ಸ್ವಾಗತಿಸಿದರು. ಉಪಾಧ್ಯಕ್ಷ ಶ್ರೀ ಸುನಿಲ್ ದೇವಾಡಿಗ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀ ದೀಪಕ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…