ದಕ್ಷಿಣ ಕನ್ನಡ : ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ, ಇಲ್ಲಿ ಒಂದು ತಿಂಗಳ ಕಾಲ ಪುರುಷೋತ್ತಮ ಮಾಸದ ಪ್ರಯುಕ್ತ ಎರ್ಪಲೆ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ನೇತೃತ್ವದಲ್ಲಿ ಆಚರಿಸಿಕೊಂಡು ಬರುತ್ತಿದ್ದ ಧಾರ್ಮಿಕ, ಸಾಂಸ್ಕೃತಿಕ, ಉಪನ್ಯಾಸ ಮಾಲಿಕೆ, ಪೂಜೆ, ಭಜನೆ, ಹೋಮ, ಅನ್ನದಾನ ಯಶಸ್ವಿಯಾಗಿ ಸಂಪನ್ನಗೊಂಡು ದೇವಸ್ಥಾನದ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಿತು.
ಸುಬ್ರಮಣ್ಯ ಭಟ್ ರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭಾ ಕಾರ್ಯಕ್ರಮದಲ್ಲಿ, ವೇದಮೂರ್ತಿ ಹರಿನಾರಾಯಣ ಅಸ್ರಣ್ಣ ಕಟೀಲು ಇವರು ಧಾರ್ಮಿಕ ಉಪನ್ಯಾಸ ನೀಡಿದರು.
ಸಭಾಧ್ಯಕ್ಷತೆಯನ್ನು ವಿಠೋಬಾ ರುಕುಮಾಯಿ ಈ ದೇವಸ್ಥಾನದ ಅಧ್ಯಕ್ಷರಾದ ಪಾಂಡುರಂಗ ಸಪ್ರೆ ವಹಿಸಿದ್ದರು, ಸಭೆಯಲ್ಲಿ ಮಂಗಳೂರು ರಾಧಾಕೃಷ್ಣ ದೇವಸ್ಥಾನದ ವೇದಮೂರ್ತಿ ಗಿರಿಧರ ಭಟ್, ಉದ್ಯಮಿ ಶ್ರೀಪತಿ ಭಟ್, ಎಂಸಿಸಿ ಬ್ಯಾಂಕಿನ ಚಂದ್ರಶೇಖರ್ ರಾವ್, ರಾಮಚಂದ್ರ ಪವನಸ್ಕರ್, ಉಮೇಶ ಪರಾಡ್ಕರ್, ರಾಮಚಂದ್ರ ಪಂಡಿತ್, ಶಶಿಕಲಾ ಲೋಕ್ರೆ ಗೌರವ ಅತಿಥಿಗಳಾಗಿ ಆಗಮಿಸಿದ್ದರು.
ಧಾರ್ಮಿಕ ಉಪನ್ಯಾಸ ನೀಡಿದ ಹರಿನಾರಾಯಣ ಅಸ್ರಣ್ಣ ಕಟೀಲು ಇವರು ಅತಿ ಕಡಿಮೆ ಜನ ಸಂಖ್ಯೆಯ ಕರಾಡ ಬ್ರಾಹ್ಮಣ ಸಮಾಜ, ಉತ್ತಮ ದೇವಸ್ಥಾನ ಹಾಗೂ ಧಾರ್ಮಿಕ ಕೆಲಸಗಳಿಗಾಗಿ ಪ್ರಸಿದ್ಧಿ ಪಡೆದಿದ್ದು, ಮುಂದಿನ ಪೀಳಿಗೆಗೆ ಮಾದರಿ ಎಂದರು ವೇದಮೂರ್ತಿ ಗಿರಿಧರ ಭಟ್ ಮಾತನಾಡಿ ವೇದ ಪುರಾಣಗಳು, ಶಾಸ್ತ್ರ ಗ್ರಂಥಗಳು ಹೇಳಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ ಮತ್ತು ಸಮಾಜವನ್ನ ಮುನ್ನಡೆಸಬೇಕಿದೆ ಎಂದರು.
ಉದ್ಯಮಿ ಶ್ರೀಪತಿ ಭಟ್ ಮಾತನಾಡಿ ತನ್ನ ಮತ್ತು ದೇವಸ್ಥಾನದ ಒಡನಾಟ, ಕಾರ್ಯಕ್ರಮಗಳಲ್ಲಿ ಭಾಗವಹಿಸುವಿಕೆ ಬಗ್ಗೆ ವಿವರಿಸಿದರು, ಶಶಿಕಲಾ ಲೋಕ್ರೆ ಮಾತನಾಡಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಮಹಿಳೆಯರ ಭಾಗವಹಿಸುವಿಕೆ, ಮತ್ತು ಮಾನಸಿಕ ನೆಮ್ಮದಿಯನ್ನ ತಿಳಿಸಿದರು.
ಕಾರ್ಯಕ್ರಮದ ಪ್ರಸಾರಕ್ಕಾಗಿ ಸಹಕರಿಸಿದ ಪತ್ರಕರ್ತ ಡಾಕ್ಟರ್ ರಾಜೇಶ್ ಭಟ್ ಮಂದಾರ ಇವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದ ನಿರೂಪಣೆ, ಸ್ವಾಗತ, ಹಾಗೂ ಧನ್ಯವಾದಗಳು ಲಕ್ಷ್ಮಿಕಾಂತ್ ಭಟ್ ನೆರವೇರಿಸಿದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…