ಮಂಗಳೂರು ನಗರದ ಫಳ್ನೀರ್ನಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಮಂಜೇಶ್ವರ ಉದ್ಯಾವರದ ಮೊಹಮ್ಮದ್ ಹನೀಫ್, ಎ.ಎನ್ ಹಾಗೂ ಸೈಯದ್ ಫೌಝಾನ್, ಕುಂಜತ್ತೂರಿನ ಸಿರಾಜುದ್ದೀನ್ ಅಬೂಬಕರ್, ಮಂಜೇಶ್ವರ ಮಿಯಾಪದವಿನ ಇಬ್ರಾಹಿಂ ಅರ್ಷಾದ್ ವಿ.ಕೆ. ಬಂಧಿತ ಆರೋಪಿಗಳು. ಬೆಂಗಳೂರಿನಿಆದ ಎಂಡಿಎಆ ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರದ ಫಳ್ನೀರ್ ಪರಿಸರದ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಸಹಿತ ಇತರ ಸೊತ್ತುಗಳೊಂದಿಗೆ ನಾಲ್ವರನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು ನಗದು ರೂ. 4000, ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500 ರೂ. ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೊಬ್ಬನು ಅಕ್ರಮವಾಗಿ ಮಾದಕ ವಸ್ತು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಇಬ್ರಾಹಿಂ ಅರ್ಷಾದ್ ಎ.ಕೆ. ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು ನಗದು ರೂ. 1000, ಮೊಬೈಲ್ ಪೋನುಗಳು 1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿ ಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 5,11,500 ಆಗಬಹುದು ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…