ವಿಟ್ಲ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳ ಕಡೆಗೆ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತರಿಂದ 5 ಜಾನುವಾರು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಬಂಧಿತ ಆರೋಪಿಗಳನ್ನು ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ ಯಾನೆ ಮೋನು, ಮಂಜೇಶ್ವರ ಬಾಕ್ರಬೈಲು ನಿವಾಸಿ ಮೂಸಾ, ಬಂಟ್ವಾಳ ಕನ್ಯಾನ ಗ್ರಾಮದ ನಿವಾಸಿ ಹಮೀದ್ ಯಾನೆ ಜಲಾಲ್ ಹಾಗೂ ಸಾಲೆತ್ತೂರಿನ ಹಮೀದ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳು ಕೆಎ-19-ಎಬಿ-1793 ಎಂಬ ಗೂಡ್ಸ್ ವಾಹನದಲ್ಲಿ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳ ಕಡೆಗೆ ಮಾಂಸಕ್ಕಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಕಲಂ: 5,6,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020 ಹಾಗೂ 11(1)(ಎ),11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960 ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…