ಜನ ಮನದ ನಾಡಿ ಮಿಡಿತ

Advertisement

ಬಿಯರ್ ಪ್ರಿಯರೇ ಎಚ್ಚರ..! ಕಿಂಗ್‌ಫಿಶರ್‌ನಲ್ಲಿ ಜೀವಕ್ಕೆ ಅಪಾಯವಾಗುವ ಅಂಶ ಸೆಡಿಮೆಂಟ್ ಪತ್ತೆ..!!

ಕಿಂಗ್‌ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಸೆಡಿಮೆಂಟ್ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ 5 ಕೋಟಿ ರೂ. ಮೌಲ್ಯದ ಕಿಂಗ್‌ಫಿಶರ್ ಬಿಯರ್ ಜಪ್ತಿ ಮಾಡಲಾಗಿದೆ.
ಜೊತೆಗೆ ನಂಜನಗೂಡಿನಿಂದ ಬಿಯರ್ ಸರಬರಾಜು ಆಗುವುದನ್ನು ಅಬಕಾರಿ ಅಧಿಕಾರಿಗಳು ತಡೆಹಿಡಿದಿದ್ದಾರೆ. ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ರಿಟೈಲ್‌ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ.

ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಇನ್‌ಹೌಸ್ ಕೆಮಿಸ್ಟ್ ವರದಿ ನೀಡಿದ್ದು ಇದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನೂ ಕಿಂಗ್ ಫಿಶರ್ ಈ ಆರೋಪವನ್ನು ತಳ್ಳಿ ಹಾಕಿದ್ದು, ಜುಲೈ 15ರಂದು ನಂಜನಗೂಡಿನಲ್ಲಿ ಕೆಲವೇ ಕೆಲವು ಬಿಯರ್ ಬಾಟಲ್‌ಗಳಲ್ಲಿ ಸಣ್ಣ ಪ್ರಮಾಣದ ಮಬ್ಬು ಕಾಣಿಸಿಕೊಂಡಿತ್ತಷ್ಟೇ. ಇದರಿಂದ ಆರೋಗ್ಯಕ್ಕೆ ಅಪಾಯವಿಲ್ಲ. ನಾವು ಅಧಿಕಾರಿಗಳೊಂದಿಗೆ ಸಹಕರಿಸುವ ಮೂಲಕ, ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ಪಾರದರ್ಶಕತೆ ಮತ್ತು ಸಹಕಾರಕ್ಕೆ ಆದ್ಯತೆ ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸುತ್ತಿದ್ದೇವೆ.

ನಮ್ಮ ಎಲ್ಲಾ ಉತ್ಪನ್ನಗಳು ನಿಗದಿತ ನಿಯಂತ್ರಕ ಮಾರ್ಗಸೂಚಿಗಳಿಗೆ ಬದ್ಧವಾಗಿರುತ್ತವೆ ಮತ್ತು ಉತ್ತಮ ಗುಣಮಟ್ಟದ ಮಾನದಂಡಗಳನ್ನು ಪೂರೈಸುತ್ತವೆ ಎಂದು ಯುನೈಟೆಡ್ ಬ್ರಿವರೀಸ್ ಲಿಮಿಟೆಡ್‌ನ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!